ADVERTISEMENT

ಮಾಲೂರು | 120ಕ್ಕೂ ಹೆಚ್ಚು ಅರ್ಜಿಗಳು ಸಲ್ಲಿಕೆ

​ಪ್ರಜಾವಾಣಿ ವಾರ್ತೆ
Published 21 ಜನವರಿ 2026, 5:39 IST
Last Updated 21 ಜನವರಿ 2026, 5:39 IST
ಮಾಲೂರು ತಾಲ್ಲೂಕು ಆಡಳಿತದ ವತಿಯಿಂದ ಹಸಾಂಡಹಳ್ಳಿ ಗ್ರಾಮ ಪಂಚಾಯಿತಿ ಆವರಣದಲ್ಲಿ ಮಂಗಳವಾರ ನಡೆದ ‘ತಾಲ್ಲೂಕು ಆಡಳಿತದ ನಡೆ ಗ್ರಾಮದ ಕಡೆ’ ಕಾರ್ಯಕ್ರಮವನ್ನು ಶಾಸಕ ಕೆ.ವೈ.ನಂಜೇಗೌಡ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು ಉದ್ಘಾಟಿಸಿದರು
ಮಾಲೂರು ತಾಲ್ಲೂಕು ಆಡಳಿತದ ವತಿಯಿಂದ ಹಸಾಂಡಹಳ್ಳಿ ಗ್ರಾಮ ಪಂಚಾಯಿತಿ ಆವರಣದಲ್ಲಿ ಮಂಗಳವಾರ ನಡೆದ ‘ತಾಲ್ಲೂಕು ಆಡಳಿತದ ನಡೆ ಗ್ರಾಮದ ಕಡೆ’ ಕಾರ್ಯಕ್ರಮವನ್ನು ಶಾಸಕ ಕೆ.ವೈ.ನಂಜೇಗೌಡ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು ಉದ್ಘಾಟಿಸಿದರು   

ಮಾಲೂರು: ಸರ್ಕಾರದ ಸವಲತ್ತು ಅರ್ಹ ಫಲಾನುಭವಿಗಳಿಗೆ ತ್ವರಿತವಾಗಿ ತಲುಪಿಸಲು. ತಾಲ್ಲೂಕು ಕಚೇರಿಗಳಿಗೆ ಅಲೆದಾಡುವುದನ್ನು ತಪ್ಪಿಸಿ, ಆಡಳಿತವನ್ನೇ ಜನರ ಬಳಿಗೆ ಕೊಂಡೊಯ್ಯುವ ಪ್ರಾಮಾಣಿಕ ಪ್ರಯತ್ನವೇ ‘ತಾಲ್ಲೂಕು ಆಡಳಿತದ ನಡೆ ಗ್ರಾಮದ ಕಡೆ’ ಕಾರ್ಯಕ್ರಮ ಎಂದು ಶಾಸಕ ಕೆ.ವೈ.ನಂಜೇಗೌಡ ತಿಳಿಸಿದರು.

ತಾಲ್ಲೂಕು ಆಡಳಿತ ವತಿಯಿಂದ ಹಸಾಂಡಹಳ್ಳಿ ಗ್ರಾಮ ಪಂಚಾಯಿತಿ ಆವರಣದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಜನ ಸಾಮಾನ್ಯರ ಸಮಸ್ಯೆಗಳನ್ನು ಆಲಿಸಿ ಸ್ಥಳದಲ್ಲೇ ಪರಿಹಾರ ನೀಡಲು ತಾಲ್ಲೂಕು ಆಡಳಿತ ಮುಂದಾಗಿದ್ದು, ಸೋಮವಾರದಿಂದ ಈ ಕಾರ್ಯಕ್ರಮ ಆಯೋಜಿಸಲಾಗಿದೆ. ಮಂಗಳವಾರ ನೂಟವೆ, ಹಸಾಂಡಹಳ್ಳಿ, ರಾಜೇನಹಳ್ಳಿ ಗ್ರಾಮ ಪಂಚಾಯಿತಿಗಳಲ್ಲಿ ಕಾರ್ಯಕ್ರಮ ನಡೆಯಿತು ಎಂದರು. 

ಜನರ ಸಮಸ್ಯೆಗಳಿಗೆ ಸ್ಪಂದಿಸಿ ಸ್ಥಳೀಯವಾಗಿಯೇ ಪರಿಹಾರ ನೀಡುವುದು ನಮ್ಮ ಆಶಯ. ಈ ಕಾರ್ಯಕ್ರಮದಲ್ಲಿ ಕಂದಾಯ ಇಲಾಖೆ, ಪಂಚಾಯತ್ ರಾಜ್, ಆಹಾರ ಇಲಾಖೆ, ಹಾಗೂ ಬೆಸ್ಕಾಂ ಸೇರಿದಂತೆ ವಿವಿಧ ಇಲಾಖೆಗಳಿಗೆ ಸಂಬಂಧಿಸಿದಂತೆ ಸಾರ್ವಜನಿಕರಿಂದ ಸುಮಾರು 120ಕ್ಕೂ ಹೆಚ್ಚು ಅರ್ಜಿಗಳು ಸಲ್ಲಿಕೆಯಾಗಿವೆ. ಸಲ್ಲಿಕೆಯಾದ ಅರ್ಜಿಗಳಲ್ಲಿ ವೃದ್ಧಾಪ್ಯ, ವಿಧವಾ ವೇತನ, ವಿದ್ಯುತ್ ಸೇರಿದಂತೆ ಹಲವು ಸಮಸ್ಯೆಗಳಿಗೆ ನಿರಾಕ್ಷೇಪಣಾ ಪತ್ರ. ಜೊತೆಗೆ ಕೆಲವು ಸಮಸ್ಯೆಗಳಿಗೆ ಸ್ಥಳದಲ್ಲೇ ಪರಿಹಾರ ನೀಡಲಾಯಿತು. ಉಳಿದ ಅರ್ಜಿಗಳನ್ನು ಪರಿಶೀಲಿಸಿ ನಿಗದಿತ ಕಾಲಮಿತಿಯೊಳಗೆ ಬಗೆಹರಿಸುವುದಾಗಿ ಭರವಸೆ ನೀಡಿದರು.

ADVERTISEMENT

ತಹಶೀಲ್ದಾರ್ ಎಂ.ವಿ.ರೂಪ, ಕೃಷ್ಣಪ್ಪ, ವಿಜಯ ನರಸಿಂಹ, ಅಂಬಿಕಾ ಅರ್ಜುನ್, ರಮೇಶ್, ಜಬಿವುಲ್ಲಾ, ಒಂ ಪ್ರಕಾಶ್ ಗೌಡ, ಕೆಂಪಯ್ಯ, ದಿವ್ಯ, ವೀಣಾ, ಗೋವಿಂದ ಗೌಡ, ಶಿವಕುಮಾರ್, ನಾರಾಯಣ ಸ್ವಾಮಿ, ನವ್ಯ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.