ADVERTISEMENT

ಮುನಿವೆಂಕಟಪ್ಪ, ಹಂದೆ, ಮುನಿಯಪ್ಪಗೆ ರಾಜ್ಯಪಾಲರಿಂದ ಗೌರವ ಡಾಕ್ಟರೇಟ್ ಪದವಿ ಪ್ರದಾನ

​ಪ್ರಜಾವಾಣಿ ವಾರ್ತೆ
Published 4 ಜುಲೈ 2023, 6:09 IST
Last Updated 4 ಜುಲೈ 2023, 6:09 IST
   

ಕೋಲಾರ: ತಮಟೆ ಕಲಾವಿದ ಪಿಂಡಿಪಾಪನಹಳ್ಳಿ ಮುನಿವೆಂಕಟಪ್ಪ (ಸಾಂಸ್ಕೃತಿಕ ಕ್ಷೇತ್ರ), ದಲಿತ ಹೋರಾಟಗಾರ ಸಿ.ಎಂ.ಮುನಿಯಪ್ಪ (ಸಾಮಾಜಿಕ ಸೇವಾ ಕ್ಷೇತ್ರ) ಹಾಗೂ ಸೌರಶಕ್ತಿಯ ಮಹತ್ವ ಸಾರಿದ ಹರೀಶ್‌ ಹಂದೆ (ವಿಜ್ಞಾನ ಮತ್ತು ತಂತ್ರಜ್ಞಾನ ಕ್ಷೇತ್ರ) ಅವರಿಗೆ ರಾಜ್ಯಪಾಲ ಥಾವರಚಂದ್‌ ಗೆಹಲೋತ್‌ ಗೌರವ ಡಾಕ್ಟರೇಟ್‌‌ ಪ್ರದಾನ ಮಾಡಿದರು.

ನಗರ ಹೊರವಲಯದ ನಂದಿನಿ ಪ್ಯಾಲೇಸ್‍ನಲ್ಲಿ ಮಂಗಳವಾರ ನಡೆದ ಬೆಂಗಳೂರು ಉತ್ತರ ವಿಶ್ವವಿದ್ಯಾಲಯದ 3ನೇ ವಾರ್ಷಿಕ ಘಟಿಕೋತ್ಸವದಲ್ಲಿ ಈ ಮೂವರನ್ನು ಅಭಿನಂದಿಸಿದರು.

ಇದೇ ಸಂದರ್ಭದಲ್ಲಿ 44 ಅಭ್ಯರ್ಥಿಗಳಿಗೆ ಚಿನ್ನದ ಪದಕ ‍ಸೇರಿ ಒಟ್ಟು 20,324 ಮಂದಿಗೆ ಪದವಿ ಪ್ರದಾನ ಮಾಡಲಾಯಿತು.

ADVERTISEMENT

ಪರಿಸರ ಮತ್ತು ಅಭಿವೃದ್ಧಿ ಪತ್ರಕರ್ತ ಪಿ.ಸಾಯಿನಾಥ್‌ ಘಟಿಕೋತ್ಸವ ಭಾಷಣ ಮಾಡಿದರು. ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ್‌, ಬೆಂಗಳೂರು ಉತ್ತರ ವಿಶ್ವವಿದ್ಯಾಲಯದ ಕುಲಪತಿ ಪ್ರೊ.ನಿರಂಜನ ವಾನಳ್ಳಿ ಪಾಲ್ಗೊಂಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.