ADVERTISEMENT

ಶಿಕ್ಷಕಿ ಮೇಲೆ ಹಲ್ಲೆ: ಆರೋಪಿ ಬಂಧನಕ್ಕೆ ಒತ್ತಾಯ

​ಪ್ರಜಾವಾಣಿ ವಾರ್ತೆ
Published 15 ಸೆಪ್ಟೆಂಬರ್ 2025, 7:01 IST
Last Updated 15 ಸೆಪ್ಟೆಂಬರ್ 2025, 7:01 IST
ಬಂಗಾರಪೇಟೆ ಪಟ್ಟಣದ ಪಲವ ತಿಮ್ಮನಹಳ್ಳಿ ವಾರ್ಡ್‌ನಲ್ಲಿ ವಾಸವಾಗಿರುವ ಶಿಕ್ಷಕಿ ಮಂಜುಳಾ ಅವರ ಮನೆಗೆ ರಾಜ್ಯ ಮಹಿಳಾ ನೌಕರರ ಸಂಘದ ರಾಜ್ಯಾಧ್ಯಕ್ಷೆ ರೋಹಿಣಿ ಗೌಡ ಸಾಂತ್ವನ ಹೇಳಿದರು
ಬಂಗಾರಪೇಟೆ ಪಟ್ಟಣದ ಪಲವ ತಿಮ್ಮನಹಳ್ಳಿ ವಾರ್ಡ್‌ನಲ್ಲಿ ವಾಸವಾಗಿರುವ ಶಿಕ್ಷಕಿ ಮಂಜುಳಾ ಅವರ ಮನೆಗೆ ರಾಜ್ಯ ಮಹಿಳಾ ನೌಕರರ ಸಂಘದ ರಾಜ್ಯಾಧ್ಯಕ್ಷೆ ರೋಹಿಣಿ ಗೌಡ ಸಾಂತ್ವನ ಹೇಳಿದರು   

ಬಂಗಾರಪೇಟೆ: ಮಾಲೂರು ತಾಲ್ಲೂಕಿನ ಕ್ಷೇತ್ರನಹಳ್ಳಿ ಕಿರಿಯ ಪ್ರಾಥಮಿಕ ಶಾಲಾ ಶಿಕ್ಷಕಿ ಮಂಜುಳಾ ಅವರ ಮೇಲೆ ಹಲ್ಲೆ ಮಾಡಿರುವ ಆರೋಪಿಯನ್ನು ಕೂಡಲೇ ಬಂಧಿಸಬೇಕೆಂದು ರಾಜ್ಯ ಮಹಿಳಾ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷೆ ರೋಹಿಣಿ ಗೌಡ ಆಗ್ರಹಿಸಿದ್ದಾರೆ.

ರೋಹಿಣಿ ಗೌಡ ಅವರು ಶಿಕ್ಷಕಿ ಮಂಜುಳಾ ಅವರ ಮನೆಗೆ ಶನಿವಾರ ಭೇಟಿ ನೀಡಿ ಸಾಂತ್ವನ ಹೇಳಿ ನಂತರ ಸುದ್ದಿಗಾರರೊಂದಿಗೆ ಮಾತನಾಡಿದರು.

ಶಿಕ್ಷಕಿ ಮೇಲೆ ಹಲ್ಲೆ ನಡೆದು ಎರಡು ದಿನ ಕಳೆದರೂ ಆರೋಪಿಯನ್ನು ಪೊಲೀಸರು ಬಂಧಿಸಿಲ್ಲ. ರಾಜ್ಯದಾದ್ಯಂತ ಸರ್ಕಾರಿ ಮಹಿಳಾ ನೌಕರರ ಮೇಲೆ ಹಲ್ಲೆ ಹೆಚ್ಚಾಗುತ್ತಿದೆ. ಈ ಬಗ್ಗೆ ಸರ್ಕಾರದ ಗಮನಕ್ಕೆ ತಂದು ಮಹಿಳಾ ನೌಕರರಿಗೆ ರಕ್ಷಣೆ ಕಲ್ಪಿಸಲು ಒತ್ತಾಯಿಸಲಾಗುವುದು ಎಂದರು.

ADVERTISEMENT

ಶಿಕ್ಷಕಿ ಮೇಲೆ ಹಲ್ಲೆ ಸಮಾಜದಲ್ಲಿ ತಲೆ ತಗ್ಗಿಸುವ ಕೃತ್ಯ. ಹಾಗಾಗಿ ಹಲ್ಲೆ ಮಾಡಿರುವ ಆರೋಪಿಗೆ ಕಠಿಣ ಶಿಕ್ಷೆ ನೀಡಬೇಕು. ಈ ಕೃತ್ಯವನ್ನು ನಮ್ಮ ಸಂಘದ ಮೂಲಕ ಶಿಕ್ಷಣ ಸಚಿವರ ಗಮನಕ್ಕೆ ತರಲಾಗುವುದು. ಮಹಿಳೆಯರ ಮೇಲೆ ಇಂತಹ ಘಟನೆಗಳು ನಡೆಯದಂತೆ ಎಲ್ಲರೂ ಹೋರಾಟ ನಡೆಸಬೇಕು ಎಂದರು.

ಈ ಸಂದರ್ಭದಲ್ಲಿ ಸುಜಾತಮ್ಮ, ಶಿಕ್ಷಕಿ ರೋಷಿಣಿಗೌಡ ಹಾಗೂ ಶಿಕ್ಷಕರು ಹಾಜರಿದ್ದರು.

ಶಿಕ್ಷಕಿ ಮೇಲೆ ಹಲ್ಲೆ: ಕ್ರಮಕ್ಕೆ ನೌಕರರ ಸಂಘ ಒತ್ತಾಯ ಪ್ರಜಾವಾಣಿ ವಾರ್ತೆ ಕೋಲಾರ‌‌\ಮಾಲೂರು: ಮಾಲೂರು ತಾಲ್ಲೂಕಿನ ಕ್ಷೇತ್ರನಹಳ್ಳಿ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕಿ ಮೇಲೆ ನಡೆದಿರುವ ಹಲ್ಲೆಯನ್ನು ಜಿಲ್ಲಾ ಸರ್ಕಾರಿ ನೌಕರರ ಸಂಘ ಖಂಡಿಸಿದ್ದು, ಕ್ರಮಕ್ಕೆ ಒತ್ತಾಯಿಸಿದೆ. ಸಂಘದ ಜಿಲ್ಲಾ ಅಧ್ಯಕ್ಷ ಎ.ಅಜಯ್ ಕುಮಾರ್‌ ಮಾತನಾಡಿ, ಹಲ್ಲೆಗೆ ಮಾಡಿದ ಚೌಡಪ್ಪ ಎಂಬುವರನ್ನು ಕೂಡಲೇ ಬಂಧಿಸಿ ಕಾನೂನು ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ. ‘ಪೋಷಕರು ತಮ್ಮ ಮಕ್ಕಳಿಗೆ ಬುದ್ಧಿ ಹೇಳುವ ಬದಲಾಗಿ ಶಾಲೆಗೆ ಬಂದು ಶಿಕ್ಷಕಿ ಮಂಜುಳಾ ಮೇಲೆಯೇ ಹಲ್ಲೆ ಮಾಡಿ ಅವಾಚ್ಯ ಶಬ್ದಗಳಿಂದ ನಿಂದಿಸಿ ತರಗತಿಯಿಂದ ಹೊರಗೆ ತಳ್ಳಿರುವುದು ಖಂಡನೀಯ’ ಎಂದಿದ್ದಾರೆ. ಕರ್ತವ್ಯನಿರತ ಸರ್ಕಾರಿ ನೌಕರರ ಮೇಲೆ ನಿರಂತರವಾಗಿ ಹಲ್ಲೆ ನಡೆಯುತ್ತಿದೆ. ಅದರಲ್ಲಿಯೂ ಶಿಕ್ಷಕ ನೌಕರರ ಮೇಲೆ ಸಣ್ಣಪುಟ್ಟ ಕಾರಣಗಳಿಗಾಗಿ ಪದೇಪದೇ ಹಲ್ಲೆ ನಡೆಯುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಷಣ್ಮುಗಯ್ಯ ಮಾತನಾಡಿ, ‘ಈ ಘಟನೆಯಿಂದ ಸರ್ಕಾರಿ ಶಾಲೆಗಳಲ್ಲಿ ಶಿಕ್ಷರು ಕೆಲಸ ಮಾಡಲು ತೊಂದರೆಯಾಗಿದ್ದು, ಭಯಬೀತರಾಗಿದ್ದಾರೆ. ನಮಗೆ ರಕ್ಷಣೆ ಬೇಕು’ ಎಂದರು. ‘ಸರ್ಕಾರಿ ನೌಕರರ ಮೇಲೆ ಹಲ್ಲೆ ಮಾಡುವುದು ಖಂಡನೀಯ. ಶಿಕ್ಷಕರ ಸಂಘ, ಕ್ಷೇತ್ರ ಶಿಕ್ಷಣ ಇಲಾಖೆ ತಾಲ್ಲೂಕು ನೌಕರರ ಸಂಘ ಈ ಘಟನೆ ಖಂಡಿಸುತ್ತದೆ. ಆರೋಪಿಯನ್ನು ಕೂಡಲೇ ಬಂಧಿಸಿ ಕ್ರಮಕೈಗೊಳ್ಳಬೇಕು’ ಎಂದು ಸರ್ಕಾರಿ ನೌಕರರ ಸಂಘದ ತಾಲ್ಲೂಕು ಅಧ್ಯಕ್ಷ ಮುನೇಗೌಡ ಆಗ್ರಹಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.