
ಪ್ರಾತಿನಿಧಿಕ ಚಿತ್ರ
ಮುಳಬಾಗಿಲು (ಕೋಲಾರ): ತಾಲ್ಲೂಕಿನ ನಂಗಲಿ ಗ್ರಾಮದ ಸರ್ಕಾರಿ ಉರ್ದು ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕ ಬಾಬಾಜಾನ್ ಮಂಗಳವಾರ ವಿದ್ಯಾರ್ಥಿಗಳ ಕೈಯಲ್ಲಿ ಶೌಚಾಲಯ ಸ್ವಚ್ಛಗೊಳಿಸಿದ್ದಾರೆ.
ಶಾಲೆಯ ಎರಡು ಮತ್ತು ಮೂರನೇ ತರಗತಿಯ ಮೂವರು ವಿದ್ಯಾರ್ಥಿನಿಯರಿಂದ ಶಾಲೆಯ ಶೌಚಾಲಯ ಹಾಗೂ ಪ್ರಾಂಗಣ ಸ್ವಚ್ಛಗೊಳಿಸಿದ್ದಾರೆ.
ಈ ಬಗ್ಗೆ ವಿದ್ಯಾರ್ಥಿಗಳನ್ನು ವಿಚಾರಿಸಿದರೆ ‘ಮುಖ್ಯ ಶಿಕ್ಷಕರು ಶೌಚಾಲಯ ಸ್ವಚ್ಛಗೊಳಿಸುವಂತೆ ಸೂಚಿಸಿದರು. ಹಾಗಾಗಿ ಸ್ವಚ್ಛಗೊಳಿಸಿದ್ದೇವೆ’ ಎಂದರು.
‘ಶಾಲೆಯ ಮುಂಭಾಗದ ಗಿಡಗಳಿಗೆ ನೀರು ಹಾಕಿ ಎಂದು ಹೇಳಿದ್ದೆ. ಶೌಚಾಲಯ ಸ್ವಚ್ಛಗೊಳಿಸಿ ಎಂದು ವಿದ್ಯಾರ್ಥಿನಿಯರಿಗೆ ಹೇಳಿರಲಿಲ್ಲ’ ಎಂದು ಮುಖ್ಯ ಶಿಕ್ಷಕ ಬಾಬಾಜಾನ್ ಸಮಜಾಯಿಷಿ ನೀಡಿದ್ದಾರೆ.
ವಿದ್ಯಾರ್ಥಿಗಳಿಂದ ಶಾಲೆಯ ಶೌಚಾಲಯ ಸ್ವಚ್ಛಗೊಳಿಸುತ್ತಿರುವ ಬಗ್ಗೆ ಸುಮಾರು ನಾಲ್ಕೈದು ತಿಂಗಳಿಂದ ದೂರು ಬಂದಿದ್ದವು. ಈ ಬಗ್ಗೆ ಪೋಷಕರು ಹಲವು ಬಾರಿ ಶಿಕ್ಷಕರಿಗೆ ಎಚ್ಚರಿಕೆ ನೀಡಿದ್ದರು. ಆದರೂ, ಶಿಕ್ಷಕರು ಮತ್ತೆ ವಿದ್ಯಾರ್ಥಿಗಳ ಕೈಯಲ್ಲಿ ಶೌಚಾಲಯ’ ಸ್ವಚ್ಛಗೊಳಿಸಿದ್ದಾರೆ ಎಂದು ಗ್ರಾಮಸ್ಥರು ದೂರಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.