ADVERTISEMENT

ಸಮಾಜದಲ್ಲಿ ಶಿಕ್ಷಕರ ಪಾತ್ರ ಹಿರಿದು: ವೈ.ಎ.ನಾರಾಯಣಸ್ವಾಮಿ

​ಪ್ರಜಾವಾಣಿ ವಾರ್ತೆ
Published 6 ಸೆಪ್ಟೆಂಬರ್ 2020, 3:12 IST
Last Updated 6 ಸೆಪ್ಟೆಂಬರ್ 2020, 3:12 IST
ಶ್ರೀನಿವಾಸಪುರದಲ್ಲಿ ಶನಿವಾರ ಏರ್ಪಡಿಸಿದ್ದ ಶಿಕ್ಷಕರ ದಿನಾಚರಣೆ ಸಮಾರಂಭವನ್ನು ವಿಧಾನ ಪರಿಷತ್‌ ಸದಸ್ಯ ಡಾ. ವೈ.ಎ.ನಾರಾಯಣಸ್ವಾಮಿ ಉದ್ಘಾಟಿಸಿದರು
ಶ್ರೀನಿವಾಸಪುರದಲ್ಲಿ ಶನಿವಾರ ಏರ್ಪಡಿಸಿದ್ದ ಶಿಕ್ಷಕರ ದಿನಾಚರಣೆ ಸಮಾರಂಭವನ್ನು ವಿಧಾನ ಪರಿಷತ್‌ ಸದಸ್ಯ ಡಾ. ವೈ.ಎ.ನಾರಾಯಣಸ್ವಾಮಿ ಉದ್ಘಾಟಿಸಿದರು   

ಶ್ರೀನಿವಾಸಪುರ: ಪ್ರಬುದ್ಧ ಸಮಾಜ ನಿರ್ಮಾಣ ಕಾರ್ಯದಲ್ಲಿ ಶಿಕ್ಷಕರ ಪಾತ್ರ ಹಿರಿದು. ಭಾರತೀಯ ಪರಂಪರೆಯ ಗುರು ಶಿಷ್ಯ ಸಂಬಂಧ ಮುಂದುವರಿಯಬೇಕು ಎಂದು ವಿಧಾನ ಪರಿಷತ್‌ ಸದಸ್ಯ ವೈ.ಎ.ನಾರಾಯಣಸ್ವಾಮಿ ಹೇಳಿದರು.

ಪಟ್ಟಣದ ವಾಸವಿ ಕಲ್ಯಾಣ ಮಂಟಪದಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆ ಹಾಗೂ ತಾಲ್ಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯಿಂದ ಶನಿವಾರ ಏರ್ಪಡಿಸಿದ್ದ ಶಿಕ್ಷಕರ ದಿನಾಚರಣೆ ಉದ್ಘಾಟಿಸಿ ಮಾತನಾಡಿದರು.

ಮಾದಕ ವಸ್ತುಗಳ ದುಷ್ಪರಿಣಾಮದ ಬಗ್ಗೆ ಶಿಕ್ಷಕರು ಮಕ್ಕಳಲ್ಲಿ ಅರಿವು ಮೂಡಿಸಬೇಕು. ಸರ್ಕಾರ ಮಾದಕ ವಸ್ತು ಮಾರಾಟ ಮತ್ತು ಬಳಕೆಯಲ್ಲಿ ನಿರತರಾಗಿರುವ ವ್ಯಕ್ತಿಗಳ ವಿರುದ್ಧ ಪಕ್ಷಾತೀತವಾಗಿ ಕಾನೂನು ಕ್ರಮ ಕೈಗೊಳ್ಳಬೇಕು. ಈ ಅನಿಷ್ಟವನ್ನು ಕೊನೆಗಾಣಿಸಬೇಕು. ಸ್ವಸ್ಥ ಸಮಾಜ ನಿರ್ಮಾಣ ಕಾರ್ಯದಲ್ಲಿ ಪ್ರತಿಯೊಬ್ಬರು ಭಾಗಿಯಾಗಬೇಕು ಎಂದು ಹೇಳಿದರು.

ADVERTISEMENT

ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ ನಿವೃತ್ತರಾದ 23 ಶಿಕ್ಷಕರು ಹಾಗೂ ಶಿಕ್ಷಕಿಯರನ್ನು ಸನ್ಮಾನಿಸಲಾಯಿತು.

ಜಿಲ್ಲಾ ಪಂಚಾಯಿತಿ ಸದಸ್ಯ ತೂಪಲ್ಲಿ ಆರ್‌.ನಾರಾಯಣಸ್ವಾಮಿ, ತಾಲ್ಲೂಕು ಪಂಚಾಯಿತಿ ಇಒ ಎಸ್‌.ಆನಂದ್‌, ಜಿಕೆ.ಎನ್‌.ವೇಣುಗೊಪಾಲ್‌, ಜಯರಾಮರೆಡ್ಡಿ, ತಹಶೀಲ್ದಾರ್‌ ಎಸ್‌.ಎಂ. ಶ್ರೀನಿವಾಸ್‌, ತಾಲ್ಲೂಕು ಪಂಚಾಯಿತಿ ಉಪಾಧ್ಯಕ್ಷ ಜಯರಾಂ, ದಿಂಬಾಲ ಅಶೋಕ್‌, ಕೆ.ಕೆ.ಮಂಜುನಾಥರೆಡ್ಡಿ, ಎಂ.ನಾಗರಾಜ್‌, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಜಿ.ಎನ್‌.ಗೋವಿಂದರೆಡ್ಡಿ, ಕೆ.ಎಚ್‌.ಸಂಪತ್‌ ಕುಮಾರ್‌, ಕ್ಷೇತ್ರ ಶಿಕ್ಷಣಾಧಿಕಾರಿ ಗಾಯತ್ರಿ, ವಸಂತ, ಶ್ರೀನಿವಾಸ್‌, ಸುಬ್ರಮಣಿ, ಸುಲೋಚನ, ಬೈರೇಗೌಡ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.