ಕೋಲಾರ: ‘ವಿದ್ಯಾರ್ಥಿಗಳಿಗೆ ಶ್ರಮದಾನದ ಮಹತ್ವ ತಿಳಿಸುವ ಮೂಲಕ ಸಮಾಜಕ್ಕಾಗಿ ನಾವು ಎಂಬ ಸೇವಾ ಮನೋಭಾವ ಬೆಳೆಸಲು ಶಿಬಿರಗಳು ಸಹಕಾರಿಯಾಗಿದೆ’ ಎಂದು ಶಿಕ್ಷಣಾಧಿಕಾರಿ ಸಿ.ಆರ್.ಅಶೋಕ್ ತಿಳಿಸಿದರು.
ಇಲ್ಲಿನ ಸಾರ್ವಜನಿಕ ಶಿಕ್ಷಣ ಇಲಾಖೆ ಕಚೇರಿ ಆವರಣದಲ್ಲಿ ಸರ್ಕಾರಿ ಬಾಲಕರ ಪದವಿ ಪೂರ್ವ ಕಾಲೇಜು ಪ್ರೌಢಶಾಲೆಯ ರಾಷ್ಟ್ರೀಯ ಸೇವಾ ಘಟಕದಿಂದ ಮಂಗಳವಾರ ಹಮ್ಮಿಕೊಂಡಿದ್ದ ಸ್ವಚ್ಛತಾ ಕಾರ್ಯಕ್ಕೆ ಚಾಲನೆ ನೀಡಿ ಮಾತನಾಡಿ, ‘ಮಾವನ ದುರಾಸೆಯಿಂದ ಪರಿಸರ ನಾಶವಾಗುತ್ತಿದೆ, ಇದರಿಂದ ಬೀರುವ ದುಷ್ಪರಿಣಾಮದ ಬಗ್ಗೆ ಜಾಗೃತಿ ಮೂಡಿಸಬೇಕು’ ಎಂದು ಸಲಹೆ ನೀಡಿದರು.
‘ಮಕ್ಕಳಲ್ಲಿ ಪರಿಸರ ಪ್ರೇಮಿ, ಸಮಾಜಮುಖಿ ಮೌಲ್ಯಗಳನ್ನು ಬೆಳೆಸಬೇಕು. ಇಂದಿನ ಶಿಕ್ಷಣದಲ್ಲಿ ಪಠ್ಯ ಕಲಿಕೆಗಿಂತಲೂ ನೈತಿಕ ಶಿಕ್ಷಣ ಅಗತ್ಯವಾಗಿದೆ. ಜ್ಞಾನ ನೀಡಿದರೆ ನೈತಿಕ ಶಿಕ್ಷಣ ಬದುಕು ಕಲಿಸುತ್ತದೆ’ ಎಂದು ಹೇಳಿದರು.
ವಿಷಯ ಪರಿವೀಕ್ಷಕ ಬಿ.ವೆಂಕಟೇಶಪ್ಪ, ಜಿಲ್ಲಾ ದೈಹಿಕ ಶಿಕ್ಷಣ ಅಧೀಕ್ಷಕ ಮಂಜುನಾಥ್, ಶಿಕ್ಷಕ ಶ್ರೀನಿವಾಸ್ ಹಾಜರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.