ಮಾಲೂರು: ತಾಲ್ಲೂಕಿನ ಪ್ರಸಿದ್ಧ ಯಾತ್ರಾ ಸ್ಥಳ ಚಿಕ್ಕತಿರುಪತಿಯ ವೆಂಕಟರಮಣ ದೇವಾಲಯದಲ್ಲಿ ಮಂಗಳವಾರ ಹುಂಡಿ ಎಣಿಕೆ ನಡೆಯಿತು.
ಕಳೆದ ನಾಲ್ಕು ತಿಂಗಳಿನಲ್ಲಿ ₹57.85 ಲಕ್ಷ ಹಾಗೂ 58 ಗ್ರಾಂ ಬಂಗಾರ, 509 ಗ್ರಾಂ ಬೆಳ್ಳಿ ಹಾಗೂ ವಿದೇಶಿ ನೋಟುಗಳು ಸಂಗ್ರಹವಾಗಿದೆ ಎಂದು ದೇವಾಲಯದ ಕಾರ್ಯನಿರ್ವಾಹಕ ಅಧಿಕಾರಿ ಸೆಲ್ವಮಣಿ ಹೇಳಿದರು.
ದೇವಾಲಯದ ಅನ್ನದಾಸೋಹ ಆವರಣದಲ್ಲಿ ನಡೆದ ಹುಂಡಿ ಎಣಿಕೆಯು ಬೆಳಿಗ್ಗೆ ಆರಂಭವಾಗಿ ಸಂಜೆವರೆಗೆ ನಡೆಯಿತು. ಹುಂಡಿ ಎಣಿಕೆ ಕಾರ್ಯದಲ್ಲಿ ತಾಲ್ಲೂಕಿನ ಲಕ್ಕೂರು ಹಾಗೂ ಮಾಸ್ತಿ ಹೋಬಳಿಯ ಕಂದಾಯ ಇಲಾಖೆ ಅಧಿಕಾರಿಗಳು ಹಾಗೂ ಕೆನರಾ ಬ್ಯಾಂಕ್ ಸಿಬ್ಬಂದಿ ಮತ್ತು ಸ್ವಯಂ ಸೇವಕರಾಗಿ ಭ್ರಮರಾಂಭ ಸೇವಾ ಸಮಿತಿಯ 50 ಮಂದಿ ಭಾಗವಹಿಸಿದ್ದರು.
ಮುಜರಾಯಿ ತಹಶೀಲ್ದಾರ್ ಶ್ರೀನಿವಾಸ್ ರೆಡ್ಡಿ, ತಹಶೀಲ್ದಾರ್ ಎಂ.ವಿ. ರೂಪಾ ಅವರ ಆದೇಶದ ಮೇರೆಗೆ ಉಪ ತಹಶೀಲ್ದಾರ್ ಚೇತನ್ ಕೆ. ಎಸ್, ಮಾಸ್ತಿ ಹಾಗೂ ಲಕ್ಕೂರು ಹೋಬಳಿಯ ಗ್ರಾಮ ಆಡಳಿತ ಅಧಿಕಾರಿಗಳು, ಗ್ರಾಮ ಸಹಾಯಕರು ಮತ್ತು ಕೆನರಾ ಬ್ಯಾಂಕ್ ಸಿಬ್ಬಂದಿ ಭಾಗವಹಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.