ADVERTISEMENT

ಕೋಲಾರ: ಬಾಲಕಿ ಮೇಲೆ ಅತ್ಯಾಚಾರ ಪ್ರಕರಣ, ಆರೋಪಿಗೆ 20 ವರ್ಷ ಜೈಲು ಶಿಕ್ಷೆ

​ಪ್ರಜಾವಾಣಿ ವಾರ್ತೆ
Published 8 ಸೆಪ್ಟೆಂಬರ್ 2022, 15:55 IST
Last Updated 8 ಸೆಪ್ಟೆಂಬರ್ 2022, 15:55 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಕೋಲಾರ: ಬಾಲಕಿ ಮೇಲೆ ಅತ್ಯಾಚಾರ ಎಸಗಿದ ಬಂಗಾರಪೇಟೆ ಪೊಲೀಸ್ ಠಾಣಾ ಸರಹದ್ದಿನ ಗ್ರಾಮವೊಂದರ ನಿವಾಸಿ ವಿ.ಹೇಮಂತ್‌ ಕುಮಾರ್‌ ಎಂಬಾತನಿಗೆ ಇಲ್ಲಿನ ಪೋಕ್ಸೊ ವಿಶೇಷ ನ್ಯಾಯಾಲಯವು ಗುರುವಾರ 20 ವರ್ಷ ಕಠಿಣ ಜೈಲು ಶಿಕ್ಷೆ ವಿಧಿಸಿದೆ.

2021ರ ಜ.19ರಂದು ಮಗುವನ್ನು ಆಡಿಸಲು ಮನೆಗೆ ಬಂದಿದ್ದ ಬಾಲಕಿಯನ್ನು ಆತ ಅತ್ಯಾಚಾರ ಮಾಡಿರುವುದು ತನಿಖೆಯಿಂದ ಸಾಬೀತಾಗಿದೆ. ಪ್ರಕರಣ ದಾಖಲಿಸಿಕೊಂಡ ಬಂಗಾರಪೇಟೆ ಪೊಲೀಸರು ತನಿಖೆ ಕೈಗೊಂಡು ನ್ಯಾಯಾಲಯದಲ್ಲಿ ದೋಷಾರೋಪ ಪಟ್ಟಿ ಸಲ್ಲಿಸಿದ್ದರು.

ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಧೀಶ ಬಿ.ಪಿ.ದೇವಮಾನೆ ಅವರು, ಅಪರಾಧಿಗೆ 20 ವರ್ಷ ಜೈಲು ಶಿಕ್ಷೆ ಹಾಗೂ ₹ 16 ಸಾವಿರ ದಂಡ ವಿಧಿಸಿದ್ದಾರೆ. ಜತೆಗೆ, ಬಾಲಕಿಗೆ ₹ 5 ಲಕ್ಷ ಪರಿಹಾರ ನೀಡಬೇಕೆಂದು ಆದೇಶಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.