ADVERTISEMENT

ಮಾಲೂರು: ತಾಲ್ಲೂಕು ಆಡಳಿತದಿಂದ ಪೂರ್ವಭಾವಿ ಸಭೆ;ಸರಳವಾಗಿ ಜಯಂತಿ ಆಚರಣೆಗೆ ನಿರ್ಧಾರ

​ಪ್ರಜಾವಾಣಿ ವಾರ್ತೆ
Published 2 ಏಪ್ರಿಲ್ 2021, 5:18 IST
Last Updated 2 ಏಪ್ರಿಲ್ 2021, 5:18 IST
ಮಾಲೂರು ಪಟ್ಟಣದ ತಾಲ್ಲೂಕು ಕಚೇರಿ ಸಭಾಂಗಣದಲ್ಲಿ ಗುರುವಾರ ಡಾ.ಬಿ.ಆರ್. ಅಂಬೇಡ್ಕರ್ ಮತ್ತು ಬಾಬು ಜಗಜೀವನ ರಾಂ ಜಯಂತಿ ಪೂರ್ವಭಾವಿ ಸಭೆಯು ತಹಶೀಲ್ದಾರ್ ಮಂಜುನಾಥ್ ಅಧ್ಯಕ್ಷತೆಯಲ್ಲಿ ನಡೆಯಿತು
ಮಾಲೂರು ಪಟ್ಟಣದ ತಾಲ್ಲೂಕು ಕಚೇರಿ ಸಭಾಂಗಣದಲ್ಲಿ ಗುರುವಾರ ಡಾ.ಬಿ.ಆರ್. ಅಂಬೇಡ್ಕರ್ ಮತ್ತು ಬಾಬು ಜಗಜೀವನ ರಾಂ ಜಯಂತಿ ಪೂರ್ವಭಾವಿ ಸಭೆಯು ತಹಶೀಲ್ದಾರ್ ಮಂಜುನಾಥ್ ಅಧ್ಯಕ್ಷತೆಯಲ್ಲಿ ನಡೆಯಿತು   

ಮಾಲೂರು: ಕೊರೊನಾ ಸೋಂಕಿನ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಅವರ ಆದೇಶದ ಮೇರೆಗೆ ಬಾಬು ಜಗಜೀವನ ರಾಂ ಹಾಗೂ ಡಾ.ಬಿ.ಆರ್. ಅಂಬೇಡ್ಕರ್ ಜಯಂತಿಯನ್ನು ಸರಳವಾಗಿ ಆಚರಣೆ ಮಾಡಲಾಗುವುದು ಎಂದು ತಹಶೀಲ್ದಾರ್ ಎಂ. ಮಂಜುನಾಥ್ ತಿಳಿಸಿದರು.

ಪಟ್ಟಣದ ತಾಲ್ಲೂಕು ಕಚೇರಿ ಸಭಾಂಗಣದಲ್ಲಿ ಗುರುವಾರ ಸಮಾಜ ಕಲ್ಯಾಣ ಇಲಾಖೆ ಹಾಗೂ ತಾಲ್ಲೂಕು ಆಡಳಿತದಿಂದ ಹಮ್ಮಿಕೊಂಡಿದ್ದ ಡಾ.ಬಿ.ಆರ್. ಅಂಬೇಡ್ಕರ್ ಹಾಗೂ ಬಾಬು ಜಗಜೀವನ ರಾಂ ಜಯಂತಿಯ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು.

ಹಿಂದಿನ ವರ್ಷವೂ ಕೋವಿಡ್-19 ಹಿನ್ನೆಲೆಯಲ್ಲಿ ಮಹಾಸಾಧಕರ ಜಯಂತಿಗಳನ್ನು ಸರಳವಾಗಿ ಆಚರಣೆ ಮಾಡಲಾಗಿತ್ತು. ಈ ಬಾರಿಯು ಅದೇ ಸನ್ನಿವೇಶ ಸೃಷ್ಟಿಯಾಗಿದೆ. ಎಲ್ಲಾ ದಲಿತ ಸಂಘಟನೆಗಳ ಮುಖಂಡರು ಹಾಗೂ ಕಾರ್ಯಕರ್ತರು ಸಹಕರಿಸಬೇಕು ಎಂದು ಮನವಿ ಮಾಡಿದರು.

ADVERTISEMENT

‘ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳು ಸರಿಯಾಗಿ ಸ್ಪಂದಿಸುತ್ತಿಲ್ಲ. ಪಟ್ಟಣದ ಹನುಮಂತ ನಗರದಲ್ಲಿರುವ ಅಂಬೇಡ್ಕರ್ ಭವನಕ್ಕೆ ಸುಣ್ಣ ಬಣ್ಣ ಮಾಡಿಸುವಂತೆ ಹಲವು ಬಾರಿ ಇಲಾಖೆಗೆ ಮನವಿ ಮಾಡಿದರೂ ಯಾವುದೇ ಪ್ರಯೋಜನವಾಗಿಲ್ಲ. ಸ್ಥಳೀಯವಾಗಿ ಕೆ.ವೈ. ನಂಜೇಗೌಡ ಶಾಸಕರಾಗಿ ಮೂರು ವರ್ಷ ಕಳೆದಿವೆ. ಇಲ್ಲಿಯವರೆಗೂ ಪರಿಶಿಷ್ಟರ ಕುಂದುಕೊರತೆ ಸಭೆ ನಡೆಸಿಲ್ಲ. ದಲಿತರ ಕಾಲೊನಿಗಳಲ್ಲಿ ಮೂಲಸೌಕರ್ಯ ಕೊರತೆ ಹೆಚ್ಚಾಗಿದೆ. ಇದು ಅಧಿಕಾರಿಗಳ ಕಾರ್ಯವೈಖರಿಗೆ ಹಿಡಿದ ಕೈಗನ್ನಡಿಯಾಗಿದೆ’ ಎಂದು ದಲಿತ ಮುಖಂಡರಾದ ಎಸ್.ಎಂ. ವೆಂಕಟೇಶ್, ಟಿ. ನಾರಾಯಣಪ್ಪ, ಪುರಸನಹಳ್ಳಿ ಶ್ರೀನಿವಾಸ್ ಆರೋಪಿಸಿದರು.

ಮುಖಂಡರಾದ ಕೋಡುರು ಎಸ್.ಎಂ. ವೆಂಕಟೇಶ್, ಗೋಪಾಲ್, ಪುರಸಭಹಳ್ಳಿ ಶ್ರೀನಿವಾಸ್, ಚವ್ವೇನಹಳ್ಳಿ ವಿಜಿ, ಸಂತೋಷ್, ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿ ಶಿವಕುಮಾರ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.