ADVERTISEMENT

ಸಕ್ರಿಯ ಸೋಂಕಿತರ ಸಂಖ್ಯೆ 25ಕ್ಕೆ ಇಳಿಕೆ

​ಪ್ರಜಾವಾಣಿ ವಾರ್ತೆ
Published 6 ಡಿಸೆಂಬರ್ 2021, 13:30 IST
Last Updated 6 ಡಿಸೆಂಬರ್ 2021, 13:30 IST

ಕೋಲಾರ: ಜಿಲ್ಲೆಯಲ್ಲಿ ಹೊಸದಾಗಿ ಕೋಲಾರ ತಾಲ್ಲೂಕಿನ ಒಬ್ಬರಿಗೆ ಕೊರೊನಾ ಸೋಂಕು ತಗುಲಿರುವುದು ಸೋಮವಾರ ದೃಢಪಟ್ಟಿದ್ದು, ಸಕ್ರಿಯ ಸೋಂಕಿತರ ಸಂಖ್ಯೆ 25ಕ್ಕೆ ಇಳಿಕೆಯಾಗಿದೆ.

ಈ ಸೋಂಕಿತರ ಮನೆ ಹಾಗೂ ಸುತ್ತಮುತ್ತಲ ಪ್ರದೇಶದಲ್ಲಿ ಸೋಂಕು ನಿವಾರಕ ದ್ರಾವಣ ಸಿಂಪಡಿಸಲಾಯಿತು. ಸೋಂಕಿತರ ಸಂಪರ್ಕಕ್ಕೆ ಬಂದ ವ್ಯಕ್ತಿಗಳನ್ನು ಪತ್ತೆ ಹಚ್ಚಿ ಕ್ವಾರಂಟೈನ್‌ ಮಾಡಲಾಗಿದೆ. ಜಿಲ್ಲಾ ಕೇಂದ್ರದ ಕೋವಿಡ್‌ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಸೋಂಕಿತರ ಪೈಕಿ ಕೋಲಾರ ಮತ್ತು ಶ್ರೀನಿವಾಸಪುರ ತಾಲ್ಲೂಕಿನ ತಲಾ ಒಬ್ಬರು ಗುಣಮುಖರಾಗಿ ಆಸ್ಪತ್ರೆಯಿಂದ ಮನೆಗೆ ಮರಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT