ADVERTISEMENT

ಕೋಲಾರ: ಜಿಲ್ಲೆಯಲ್ಲಿ ಕೊರೊನಾ ಸೋಂಕಿನ ನಾಗಾಲೋಟ

​ಪ್ರಜಾವಾಣಿ ವಾರ್ತೆ
Published 8 ಜನವರಿ 2022, 14:39 IST
Last Updated 8 ಜನವರಿ 2022, 14:39 IST

ಕೋಲಾರ: ಜಿಲ್ಲೆಯಲ್ಲಿ ಕೊರೊನಾ ಸೋಂಕಿನ ನಾಗಾಲೋಟ ಮುಂದುವರಿದಿದ್ದು, ಹೊಸದಾಗಿ 65 ಮಂದಿಗೆ ಸೋಂಕು ತಗುಲಿರುವುದು ಶನಿವಾರ ದೃಢಪಟ್ಟಿದೆ. ಇದರೊಂದಿಗೆ ಸಕ್ರಿಯ ಸೋಂಕಿತರ ಸಂಖ್ಯೆ ದ್ವಿಶತಕದ ಗಡಿ ದಾಟಿದೆ.

ಸೋಂಕು ಹರಡುವಿಕೆ ಪ್ರಮಾಣ ಏರು ಗತಿಯಲ್ಲೇ ಸಾಗಿದ್ದು, ಆರೋಗ್ಯ ಇಲಾಖೆ ಬೆಚ್ಚಿಬಿದ್ದಿದೆ. ಮತ್ತೊಂದೆಡೆ ಕೋವಿಡ್‌ 3ನೇ ಅಲೆ ಭೀತಿಗೆ ಜಿಲ್ಲೆಯ ಜನ ಆತಂಕಗೊಂಡಿದ್ದಾರೆ.

ಕೋಲಾರ ತಾಲ್ಲೂಕಿನ 29 ಮಂದಿಗೆ, ಮಾಲೂರು ತಾಲ್ಲೂಕಿನ 10 ಮಂದಿಗೆ, ಬಂಗಾರಪೇಟೆ ತಾಲ್ಲೂಕಿನ 6 ಮಂದಿಗೆ, ಕೆಜಿಎಫ್‌ ತಾಲ್ಲೂಕಿನ 13 ಮಂದಿಗೆ, ಮುಳಬಾಗಿಲು ತಾಲ್ಲೂಕಿನ 5 ಮಂದಿಗೆ, ಶ್ರೀನಿವಾಸಪುರ ತಾಲ್ಲೂಕಿನ ಇಬ್ಬರಿಗೆ ಸೋಂಕು ಬಂದಿದ್ದು, ಸಕ್ರಿಯ ಸೋಂಕಿತರ ಸಂಖ್ಯೆ 226ಕ್ಕೆ ಜಿಗಿದಿದೆ.

ADVERTISEMENT

ಈ ಸೋಂಕಿತರ ಮನೆ ಹಾಗೂ ಸುತ್ತಮುತ್ತಲ ಪ್ರದೇಶದಲ್ಲಿ ಸೋಂಕು ನಿವಾರಕ ದ್ರಾವಣ ಸಿಂಪಡಿಸಲಾಯಿತು. ಸೋಂಕಿತರ ಸಂಪರ್ಕಕ್ಕೆ ಬಂದ ವ್ಯಕ್ತಿಗಳನ್ನು ಪತ್ತೆ ಹಚ್ಚಿ ಕ್ವಾರಂಟೈನ್‌ ಮಾಡಲಾಗಿದೆ. ಜಿಲ್ಲಾ ಕೇಂದ್ರದ ಕೋವಿಡ್‌ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಸೋಂಕಿತರ ಪೈಕಿ ಬಂಗಾರಪೇಟೆ ತಾಲ್ಲೂಕಿನ 3 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಮನೆಗೆ ಮರಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.