ಕೋಲಾರ: ಜಿಲ್ಲೆಯಲ್ಲಿ ಹೊಸದಾಗಿ 9 ಮಂದಿಗೆ ಕೊರೊನಾ ಸೋಂಕು ಹರಡಿರುವುದು ಮಂಗಳವಾರ ದೃಢಪಟ್ಟಿದ್ದು, ಸಕ್ರಿಯ ಸೋಂಕಿತರ ಸಂಖ್ಯೆ 122ಕ್ಕೆ ಏರಿಕೆಯಾಗಿದೆ.
ಕೋಲಾರ ತಾಲ್ಲೂಕಿನ 6 ಮಂದಿಗೆ, ಮಾಲೂರು, ಬಂಗಾರಪೇಟೆ ಮತ್ತು ಮುಳಬಾಗಿಲು ತಾಲ್ಲೂಕಿನ ತಲಾ ಒಬ್ಬರಿಗೆ ಸೋಂಕು ಬಂದಿದೆ. ಈ ಸೋಂಕಿತರ ಮನೆ ಹಾಗೂ ಸುತ್ತಮುತ್ತಲ ಪ್ರದೇಶದಲ್ಲಿ ಸೋಂಕು ನಿವಾರಕ ದ್ರಾವಣ ಸಿಂಪಡಿಸಲಾಯಿತು. ಸೋಂಕಿತರ ಸಂಪರ್ಕಕ್ಕೆ ಬಂದ ವ್ಯಕ್ತಿಗಳನ್ನು ಪತ್ತೆ ಹಚ್ಚಿ ಕ್ವಾರಂಟೈನ್ ಮಾಡಲಾಗಿದೆ.
ಜಿಲ್ಲಾ ಕೇಂದ್ರದ ಕೋವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಸೋಂಕಿತರ ಪೈಕಿ 14 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಮನೆಗೆ ಮರಳಿದರು. ಕೋಲಾರ ತಾಲ್ಲೂಕಿನ 6, ಮಾಲೂರು ಮತ್ತು ಬಂಗಾರಪೇಟೆ ತಾಲ್ಲೂಕಿನ ತಲಾ ಇಬ್ಬರು, ಶ್ರೀನಿವಾಸಪುರ ತಾಲ್ಲೂಕಿನ 3, ಕೆಜಿಎಫ್ ತಾಲ್ಲೂಕಿನ ಒಬ್ಬರನ್ನು ಮನೆಗೆ ಕಳುಹಿಸಲಾಯಿತು.
Lok Sabha Elections Results 2024 |ನರೇಂದ್ರ ಮೋದಿ ಅವರ 'ವಿಕಸಿತ ಭಾರತ' ಅಥವಾ ರಾಹುಲ್ ಗಾಂಧಿ ಅವರ ಇಂಡಿಯಾ ಐಕ್ಯ ಭಾರತ? ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವದ 18ನೇ ಲೋಕಸಭೆಗೆ ನಡೆದ ಚುನಾವಣೆ ಫಲಿತಾಂಶದ ಕ್ಷಣ ಕ್ಷಣದ ಮಾಹಿತಿ, ವಿಶ್ವಾಸಾರ್ಹ ವಿಶ್ಲೇಷಣೆ, ಅಂಕಿ ಅಂಶಗಳಿಗಾಗಿ ಪ್ರಜಾವಾಣಿ ನೋಡಿ. ಇದರ ಜೊತಗೆ, ಆಂಧ್ರಪ್ರದೇಶ ಮತ್ತು ಒಡಿಶಾ ವಿಧಾನಸಭೆ ಚುನಾವಣೆಯ ಫಲಿತಾಂಶವೂ ಇಲ್ಲೇ ಲಭ್ಯ. ಪ್ರಜಾವಾಣಿಯನ್ನು ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಫಾಲೋ ಮಾಡಲು ಮರೆಯದಿರಿ.