ADVERTISEMENT

ಕೋವಿಡ್ ಸಕ್ರಿಯ ಸೋಂಕಿತರ ಸಂಖ್ಯೆ 2,455ಕ್ಕೆ ಏರಿಕೆ

​ಪ್ರಜಾವಾಣಿ ವಾರ್ತೆ
Published 17 ಜನವರಿ 2022, 16:39 IST
Last Updated 17 ಜನವರಿ 2022, 16:39 IST
ಪ್ರಾತಿನಿಧಿಕ ಚಿತ್ಕ
ಪ್ರಾತಿನಿಧಿಕ ಚಿತ್ಕ   

ಕೋಲಾರ: ಜಿಲ್ಲೆಯಲ್ಲಿ ಹೊಸದಾಗಿ 463 ಮಂದಿಗೆ ಸೋಂಕು ತಗುಲಿರುವುದು ಸೋಮವಾರ ದೃಢಪಟ್ಟಿದ್ದು, ಸಕ್ರಿಯ ಸೋಂಕಿತರ ಸಂಖ್ಯೆ 2,455ಕ್ಕೆ ಏರಿಕೆಯಾಗಿದೆ.

ಕೋಲಾರ ತಾಲ್ಲೂಕಿನ 164 ಮಂದಿಗೆ, ಮಾಲೂರು ತಾಲ್ಲೂಕಿನ 94 ಮಂದಿಗೆ, ಬಂಗಾರಪೇಟೆ ತಾಲ್ಲೂಕಿನ 21 ಮಂದಿಗೆ, ಕೆಜಿಎಫ್‌ ತಾಲ್ಲೂಕಿನ 136 ಮಂದಿಗೆ, ಮುಳಬಾಗಿಲು ತಾಲ್ಲೂಕಿನ 23 ಮಂದಿಗೆ, ಶ್ರೀನಿವಾಸಪುರ ತಾಲ್ಲೂಕಿನ 25 ಮಂದಿಗೆ ಸೋಂಕು ಬಂದಿದೆ.

ಈ ಸೋಂಕಿತರ ಮನೆ ಹಾಗೂ ಸುತ್ತಮುತ್ತಲ ಪ್ರದೇಶದಲ್ಲಿ ಸೋಂಕು ನಿವಾರಕ ದ್ರಾವಣ ಸಿಂಪಡಿಸಲಾಯಿತು. ಸೋಂಕಿತರ ಸಂಪರ್ಕಕ್ಕೆ ಬಂದ ವ್ಯಕ್ತಿಗಳನ್ನು ಪತ್ತೆ ಹಚ್ಚಿ ಕ್ವಾರಂಟೈನ್‌ ಮಾಡಲಾಗಿದೆ. ಜಿಲ್ಲಾ ಕೇಂದ್ರದ ಕೋವಿಡ್‌ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಸೋಂಕಿತರ ಪೈಕಿ 320 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಮನೆಗೆ ಮರಳಿದರು.

ADVERTISEMENT

ಕೋಲಾರ ತಾಲ್ಲೂಕಿನ 94 ಮಂದಿ, ಮಾಲೂರು ತಾಲ್ಲೂಕಿನ 46, ಬಂಗಾರಪೇಟೆ ತಾಲ್ಲೂಕಿನ 40, ಕೆಜಿಎಫ್‌ ತಾಲ್ಲೂಕಿನ 80, ಮುಳಬಾಗಿಲು ತಾಲ್ಲೂಕಿನ 38, ಶ್ರೀನಿವಾಸಪುರ ತಾಲ್ಲೂಕಿನ 21 ಮಂದಿ ಮತ್ತು ಹೊರ ಜಿಲ್ಲೆಯ ಒಬ್ಬರನ್ನು ಆಸ್ಪತ್ರೆಯಿಂದ ಮನೆಗೆ ಕಳುಹಿಸಲಾಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.