ADVERTISEMENT

ಕೋಲಾರ: ಸೋಂಕಿತರ ಸಂಖ್ಯೆ 41ಕ್ಕೆ ಇಳಿಕೆ

​ಪ್ರಜಾವಾಣಿ ವಾರ್ತೆ
Published 10 ಅಕ್ಟೋಬರ್ 2021, 15:02 IST
Last Updated 10 ಅಕ್ಟೋಬರ್ 2021, 15:02 IST

ಕೋಲಾರ: ಜಿಲ್ಲೆಯಲ್ಲಿ ಹೊಸದಾಗಿ 4 ಮಂದಿಗೆ ಕೊರೊನಾ ಸೋಂಕು ತಗುಲಿರುವುದು ಭಾನುವಾರ ದೃಢಪಟ್ಟಿದ್ದು, ಸಕ್ರಿಯ ಸೋಂಕಿತರ ಸಂಖ್ಯೆ 41ಕ್ಕೆ ಇಳಿಕೆಯಾಗಿದೆ.

ಕೋಲಾರ ತಾಲ್ಲೂಕಿನ 3 ಮಂದಿಗೆ, ಬಂಗಾರಪೇಟೆ ತಾಲ್ಲೂಕಿನ ಒಬ್ಬರಿಗೆ ಸೋಂಕು ಬಂದಿದೆ. ಈ ಸೋಂಕಿತರ ಮನೆ ಹಾಗೂ ಸುತ್ತಮುತ್ತಲ ಪ್ರದೇಶದಲ್ಲಿ ಸೋಂಕು ನಿವಾರಕ ದ್ರಾವಣ ಸಿಂಪಡಿಸಲಾಯಿತು. ಸೋಂಕಿತರ ಸಂಪರ್ಕಕ್ಕೆ ಬಂದ ವ್ಯಕ್ತಿಗಳನ್ನು ಪತ್ತೆ ಹಚ್ಚಿ ಕ್ವಾರಂಟೈನ್‌ ಮಾಡಲಾಗಿದೆ.

ಜಿಲ್ಲಾ ಕೇಂದ್ರದ ಕೋವಿಡ್‌ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಸೋಂಕಿತರ ಪೈಕಿ 6 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಮನೆಗೆ ಮರಳಿದರು. ಕೋಲಾರ ತಾಲ್ಲೂಕಿನ 3 ಮಂದಿ, ಮಾಲೂರು ತಾಲ್ಲೂಕಿನ ಒಬ್ಬರು, ಕೆಜಿಎಫ್‌ ತಾಲ್ಲೂಕಿನ ಇಬ್ಬರನ್ನು ಆಸ್ಪತ್ರೆಯಿಂದ ಮನೆಗೆ ಕಳುಹಿಸಲಾಯಿತು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.