ADVERTISEMENT

ಕೋಲಾರ: ಶೂನ್ಯ ತಲುಪಿದ ಸೋಂಕಿನ ಸಂಖ್ಯೆ

​ಪ್ರಜಾವಾಣಿ ವಾರ್ತೆ
Published 20 ನವೆಂಬರ್ 2020, 16:03 IST
Last Updated 20 ನವೆಂಬರ್ 2020, 16:03 IST

ಕೋಲಾರ: ಜಿಲ್ಲೆಯಲ್ಲಿ ಹೊಸದಾಗಿ ದೃಢಪಟ್ಟ ಕೊರೊನಾ ಸೋಂಕಿನ ಪ್ರಕರಣಗಳ ಸಂಖ್ಯೆ ಶುಕ್ರವಾರ ಶೂನ್ಯ ತಲುಪಿದ್ದು, ಆರೋಗ್ಯ ಇಲಾಖೆ ಕೊಂಚ ನಿರಾಳವಾಗಿದೆ.

ಜಿಲ್ಲೆಯಲ್ಲಿ ಕಳೆದ 8 ತಿಂಗಳಲ್ಲಿ ಪ್ರತಿನಿತ್ಯ ಕೊರೊನಾ ಪ್ರಕರಣಗಳು ವರದಿಯಾಗುತ್ತಿದ್ದವು. ಆದರೆ, ಇದೇ ಮೊದಲ ಬಾರಿಗೆ ಶುಕ್ರವಾರ ಒಂದೇ ಒಂದು ಪ್ರಕರಣ ಸಹ ಪತ್ತೆಯಾಗಿಲ್ಲ.

ಮತ್ತೊಂದೆಡೆ ಕೋವಿಡ್‌ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಸೋಂಕಿತರ ಪೈಕಿ 25 ಮಂದಿ ಗುಣಮುಖರಾಗಿ ಮನೆಗೆ ಮರಳಿದರು. ಕೋಲಾರ ಮತ್ತು ಕೆಜಿಎಫ್‌ ತಾಲ್ಲೂಕಿನ ತಲಾ 7 ಮಂದಿ, ಮಾಲೂರು ತಾಲ್ಲೂಕಿನ ಇಬ್ಬರು, ಬಂಗಾರಪೇಟೆ ಮತ್ತು ಮುಳಬಾಗಿಲು ತಾಲ್ಲೂಕಿನ ತಲಾ 4 ಮಂದಿ ಹಾಗೂ ಶ್ರೀನಿವಾಸಪುರ ತಾಲ್ಲೂಕಿನ ಒಬ್ಬರನ್ನು ಆಸ್ಪತ್ರೆಯಿಂದ ಬೀಳ್ಕೊಡಲಾಯಿತು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.