ಕೋಲಾರ: ಜಿಲ್ಲೆಯ ಕೋವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕೊರೊನಾ ಸೋಂಕಿತರ ಪೈಕಿ 5 ಮಂದಿ ಗುಣಮುಖರಾಗಿ ಮಂಗಳವಾರ ಮನೆಗೆ ಮರಳಿದ್ದು, ಸಕ್ರಿಯ ಸೋಂಕಿತರ ಸಂಖ್ಯೆ 42ಕ್ಕೆ ಇಳಿಕೆಯಾಗಿದೆ.
ಮಾಲೂರು ತಾಲ್ಲೂಕಿನ ಇಬ್ಬರು, ಕೆಜಿಎಫ್ ತಾಲ್ಲೂಕಿನ 3 ಮಂದಿಯನ್ನು ಆಸ್ಪತ್ರೆಯಿಂದ ಬೀಳ್ಕೊಡಲಾಯಿತು. ಹೊಸದಾಗಿ ಬಂಗಾರಪೇಟೆ ಮತ್ತು ಕೆಜಿಎಫ್ ತಾಲ್ಲೂಕಿನ ತಲಾ ಒಬ್ಬರಿಗೆ ಸೋಂಕು ಹರಡಿರುವುದು ದೃಢಪಟ್ಟಿದೆ.
ಈ ಸೋಂಕಿತರ ಮನೆ ಹಾಗೂ ಸುತ್ತಮುತ್ತಲ ಪ್ರದೇಶದಲ್ಲಿ ಸೋಂಕು ನಿವಾರಕ ದ್ರಾವಣ ಸಿಂಪಡಿಸಲಾಯಿತು. ಸೋಂಕಿತರ ಸಂಪರ್ಕಕ್ಕೆ ಬಂದ ವ್ಯಕ್ತಿಗಳನ್ನು ಪತ್ತೆ ಹಚ್ಚಿ ಕ್ವಾರಂಟೈನ್ ಮಾಡಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.