ADVERTISEMENT

ಸೋಂಕಿತರ ಸಂಖ್ಯೆ 123ಕ್ಕೆ ಏರಿಕೆ

​ಪ್ರಜಾವಾಣಿ ವಾರ್ತೆ
Published 25 ಸೆಪ್ಟೆಂಬರ್ 2021, 13:39 IST
Last Updated 25 ಸೆಪ್ಟೆಂಬರ್ 2021, 13:39 IST

ಕೋಲಾರ: ಜಿಲ್ಲೆಯಲ್ಲಿ ಹೊಸದಾಗಿ 22 ಮಂದಿಗೆ ಕೊರೊನಾ ಸೋಂಕು ತಗುಲಿರುವುದು ಶನಿವಾರ ದೃಢಪಟ್ಟಿದ್ದು, ಸಕ್ರಿಯ ಸೋಂಕಿತರ ಸಂಖ್ಯೆ 123ಕ್ಕೆ ಏರಿಕೆಯಾಗಿದೆ.

ಕೋಲಾರ ತಾಲ್ಲೂಕಿನ 8 ಮಂದಿಗೆ, ಮಾಲೂರು ತಾಲ್ಲೂಕಿನ ಒಬ್ಬರಿಗೆ, ಕೆಜಿಎಫ್‌ ತಾಲ್ಲೂಕಿನ 5 ಮಂದಿಗೆ, ಮುಳಬಾಗಿಲು ತಾಲ್ಲೂಕಿನ ಇಬ್ಬರಿಗೆ, ಶ್ರೀನಿವಾಸಪುರ ತಾಲ್ಲೂಕಿನ 6 ಮಂದಿಗೆ ಸೋಂಕು ಬಂದಿದೆ. ಈ ಸೋಂಕಿತರ ಮನೆ ಹಾಗೂ ಸುತ್ತಮುತ್ತಲ ಪ್ರದೇಶದಲ್ಲಿ ಸೋಂಕು ನಿವಾರಕ ದ್ರಾವಣ ಸಿಂಪಡಿಸಲಾಯಿತು. ಸೋಂಕಿತರ ಸಂಪರ್ಕಕ್ಕೆ ಬಂದ ವ್ಯಕ್ತಿಗಳನ್ನು ಪತ್ತೆ ಹಚ್ಚಿ ಕ್ವಾರಂಟೈನ್‌ ಮಾಡಲಾಗಿದೆ.

ಜಿಲ್ಲಾ ಕೇಂದ್ರದ ಕೋವಿಡ್‌ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಸೋಂಕಿತರ ಪೈಕಿ 17 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಮನೆಗೆ ಮರಳಿದರು. ಕೋಲಾರ ಮತ್ತು ಶ್ರೀನಿವಾಸಪುರ ತಾಲ್ಲೂಕಿನ ತಲಾ 5 ಮಂದಿ, ಬಂಗಾರಪೇಟೆ ತಾಲ್ಲೂಕು ಹಾಗೂ ಹೊರ ಜಿಲ್ಲೆಯ ತಲಾ ಒಬ್ಬರು, ಕೆಜಿಎಫ್‌ ತಾಲ್ಲೂಕಿನ ಇಬ್ಬರು, ಮುಳಬಾಗಿಲು ತಾಲ್ಲೂಕಿನ 3 ಮಂದಿಯನ್ನು ಆಸ್ಪತ್ರೆಯಿಂದ ಮನೆಗೆ ಕಳುಹಿಸಲಾಯಿತು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.