ಕೋಲಾರ: ಜಿಲ್ಲೆಯ ಕೋವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕೊರೊನಾ ಸೋಂಕಿತರ ಪೈಕಿ 7 ಮಂದಿ ಗುಣಮುಖರಾಗಿ ಸೋಮವಾರ ಮನೆಗೆ ಮರಳಿದ್ದು, ಸಕ್ರಿಯ ಸೋಂಕಿತರ ಸಂಖ್ಯೆ 26ಕ್ಕೆ ಇಳಿಕೆಯಾಗಿದೆ.
ಕೋಲಾರ ಮತ್ತು ಮುಳಬಾಗಿಲು ತಾಲ್ಲೂಕಿನ ತಲಾ ಒಬ್ಬರು, ಮಾಲೂರು ತಾಲ್ಲೂಕಿನ ಇಬ್ಬರು ಹಾಗೂ ಶ್ರೀನಿವಾಸಪುರ ತಾಲ್ಲೂಕಿನ 3 ಮಂದಿಯನ್ನು ಆಸ್ಪತ್ರೆಯಿಂದ ಬೀಳ್ಕೊಡಲಾಯಿತು. ಹೊಸದಾಗಿ ಯಾವುದೇ ವ್ಯಕ್ತಿಗೆ ಸೋಂಕು ಹರಡಿದ ಪ್ರಕರಣ ವರದಿಯಾಗಿಲ್ಲ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.