ಕೋಲಾರ: ಜಿಲ್ಲೆಯಲ್ಲಿ ಹೊಸದಾಗಿ 7 ಮಂದಿಗೆ ಕೊರೊನಾ ಸೋಂಕು ತಗುಲಿರುವುದು ಶನಿವಾರ ದೃಢಪಟ್ಟಿದ್ದು, ಸಕ್ರಿಯ ಸೋಂಕಿತರ ಸಂಖ್ಯೆ 87ಕ್ಕೆ ಇಳಿಕೆಯಾಗಿದೆ.
ಕೋಲಾರ ತಾಲ್ಲೂಕಿನ ತಲಾ 3 ಮಂದಿಗೆ, ಮಾಲೂರು ಹಾಗೂ ಮುಳಬಾಗಿಲು ತಾಲ್ಲೂಕಿನ ತಲಾ ಒಬ್ಬರಿಗೆ, ಶ್ರೀನಿವಾಸಪುರ ತಾಲ್ಲೂಕಿನ ಇಬ್ಬರಿಗೆ ಸೋಂಕು ಬಂದಿದೆ. ಈ ಸೋಂಕಿತರ ಮನೆ ಹಾಗೂ ಸುತ್ತಮುತ್ತಲ ಪ್ರದೇಶದಲ್ಲಿ ಸೋಂಕು ನಿವಾರಕ ದ್ರಾವಣ ಸಿಂಪಡಿಸಲಾಯಿತು. ಸೋಂಕಿತರ ಸಂಪರ್ಕಕ್ಕೆ ಬಂದ ವ್ಯಕ್ತಿಗಳನ್ನು ಪತ್ತೆ ಹಚ್ಚಿ ಕ್ವಾರಂಟೈನ್ ಮಾಡಲಾಗಿದೆ.
ಜಿಲ್ಲಾ ಕೇಂದ್ರದ ಕೋವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಸೋಂಕಿತರ ಪೈಕಿ 13 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಮನೆಗೆ ಮರಳಿದರು. ಕೋಲಾರ ತಾಲ್ಲೂಕಿನ 7 ಮಂದಿ, ಕೆಜಿಎಫ್ ತಾಲ್ಲೂಕಿನ 3, ಮುಳಬಾಗಿಲು ತಾಲ್ಲೂಕಿನ ಇಬ್ಬರು, ಶ್ರೀನಿವಾಸಪುರ ತಾಲ್ಲೂಕಿನ ಒಬ್ಬರನ್ನು ಆಸ್ಪತ್ರೆಯಿಂದ ಮನೆಗೆ ಕಳುಹಿಸಲಾಯಿತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.