ADVERTISEMENT

ಸೋಂಕಿತರ ಸಂಖ್ಯೆ 23ಕ್ಕೆ ಏರಿಕೆ

​ಪ್ರಜಾವಾಣಿ ವಾರ್ತೆ
Published 29 ನವೆಂಬರ್ 2021, 14:34 IST
Last Updated 29 ನವೆಂಬರ್ 2021, 14:34 IST

ಕೋಲಾರ: ಜಿಲ್ಲೆಯಲ್ಲಿ ಹೊಸದಾಗಿ ಕೋಲಾರ ತಾಲ್ಲೂಕಿನ ಇಬ್ಬರಿಗೆ ಕೊರೊನಾ ಸೋಂಕು ತಗುಲಿರುವುದು ಸೋಮವಾರ ದೃಢಪಟ್ಟಿದ್ದು, ಸಕ್ರಿಯ ಸೋಂಕಿತರ ಸಂಖ್ಯೆ 23ಕ್ಕೆ ಏರಿಕೆಯಾಗಿದೆ.

ಈ ಸೋಂಕಿತರ ಮನೆ ಹಾಗೂ ಸುತ್ತಮುತ್ತಲ ಪ್ರದೇಶದಲ್ಲಿ ಸೋಂಕು ನಿವಾರಕ ದ್ರಾವಣ ಸಿಂಪಡಿಸಲಾಯಿತು. ಸೋಂಕಿತರ ಸಂಪರ್ಕಕ್ಕೆ ಬಂದ ವ್ಯಕ್ತಿಗಳನ್ನು ಪತ್ತೆ ಹಚ್ಚಿ ಕ್ವಾರಂಟೈನ್‌ ಮಾಡಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT