ADVERTISEMENT

ಕೋಲಾರ: 772ಕ್ಕೆ ಏರಿದ ಸೋಂಕಿತರ ಸಂಖ್ಯೆ

​ಪ್ರಜಾವಾಣಿ ವಾರ್ತೆ
Published 1 ನವೆಂಬರ್ 2020, 15:22 IST
Last Updated 1 ನವೆಂಬರ್ 2020, 15:22 IST

ಕೋಲಾರ: ಜಿಲ್ಲೆಯಲ್ಲಿ ಹೊಸದಾಗಿ 61 ಮಂದಿಗೆ ಕೊರೊನಾ ಸೋಂಕು ಹರಡಿರುವುದು ಭಾನುವಾರ ದೃಢಪಟ್ಟಿದ್ದು, ಸಕ್ರಿಯ ಸೋಂಕಿತರ ಸಂಖ್ಯೆ 772ಕ್ಕೆ ಏರಿಕೆಯಾಗಿದೆ.

ಮುಳಬಾಗಿಲು ತಾಲ್ಲೂಕಿನಲ್ಲಿ ಅತಿ ಹೆಚ್ಚು 14 ಮಂದಿಗೆ ಸೋಂಕು ಹರಡಿದೆ. ಕೋಲಾರ ತಾಲ್ಲೂಕಿನ 13, ಮಾಲೂರು ತಾಲ್ಲೂಕಿನ 10, ಬಂಗಾರಪೇಟೆ ಮತ್ತು ಶ್ರೀನಿವಾಸಪುರ ತಾಲ್ಲೂಕಿನ ತಲಾ 6 ಹಾಗೂ ಕೆಜಿಎಫ್‌ ತಾಲ್ಲೂಕಿನ 12 ಮಂದಿಗೆ ಸೋಂಕು ಬಂದಿದೆ.

ಈ ಸೋಂಕಿತರ ಮನೆ ಹಾಗೂ ಸುತ್ತಮುತ್ತಲ ಪ್ರದೇಶದಲ್ಲಿ ಸೋಂಕು ನಿವಾರಕ ದ್ರಾವಣ ಸಿಂಪಡಿಸಲಾಯಿತು. ಸೋಂಕಿತರ ಸಂಪರ್ಕಕ್ಕೆ ಬಂದ ವ್ಯಕ್ತಿಗಳನ್ನು ಪತ್ತೆ ಹಚ್ಚಿ ಕ್ವಾರಂಟೈನ್‌ ಮಾಡಲಾಗಿದೆ.

ADVERTISEMENT

ಜಿಲ್ಲಾ ಕೇಂದ್ರದ ಕೋವಿಡ್‌ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಸೋಂಕಿತರ ಪೈಕಿ 48 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಮನೆಗೆ ಮರಳಿದರು. ಕೋಲಾರ ತಾಲ್ಲೂಕಿನ 13 ಮಂದಿ, ಮಾಲೂರು ತಾಲ್ಲೂಕಿನ 25, ಕೆಜಿಎಫ್‌ ತಾಲ್ಲೂಕಿನ 6, ಬಂಗಾರಪೇಟೆ ಮತ್ತು ಮುಳಬಾಗಿಲು ತಾಲ್ಲೂಕಿನ ತಲಾ ಇಬ್ಬರನ್ನು ಮನೆಗೆ ಕಳುಹಿಸಲಾಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.