ಕೋಲಾರ: ಜಿಲ್ಲೆಯ ಕೋವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಕೊರೊನಾ ಸೋಂಕಿತರ ಪೈಕಿ 20 ಮಂದಿ ಗುಣಮುಖರಾಗಿ ಸೋಮವಾರ ಮನೆಗೆ ಮರಳಿದ್ದು, ಸಕ್ರಿಯ ಸೋಂಕಿತರ ಸಂಖ್ಯೆ 134ಕ್ಕೆ ಇಳಿದಿದೆ.
ಕೋಲಾರ ತಾಲ್ಲೂಕಿನ 6 ಮಂದಿ, ಬಂಗಾರಪೇಟೆ ತಾಲ್ಲೂಕಿನ 3, ಕೆಜಿಎಫ್ ತಾಲ್ಲೂಕಿನ 7 ಮತ್ತು ಶ್ರೀನಿವಾಸಪುರ ತಾಲ್ಲೂಕಿನ ತಲಾ 4 ಮಂದಿಯನ್ನು ಆಸ್ಪತ್ರೆಯಿಂದ ಬೀಳ್ಕೊಡಲಾಯಿತು.
ಹೊಸದಾಗಿ 8 ಮಂದಿಗೆ ಸೋಂಕು ಹರಡಿರುವುದು ದೃಢಪಟ್ಟಿದೆ. ಮಾಲೂರು ತಾಲ್ಲೂಕಿನ ಇಬ್ಬರಿಗೆ, ಕೆಜಿಎಫ್ ತಾಲ್ಲೂಕಿನ 5 ಮಂದಿಗೆ ಹಾಗೂ ಮುಳಬಾಗಿಲು ತಾಲ್ಲೂಕಿನ ಒಬ್ಬರಿಗೆ ಸೋಂಕು ತಗುಲಿದೆ. ಈ ಸೋಂಕಿತರ ಮನೆ ಹಾಗೂ ಸುತ್ತಮುತ್ತಲ ಪ್ರದೇಶದಲ್ಲಿ ಸೋಂಕು ನಿವಾರಕ ದ್ರಾವಣ ಸಿಂಪಡಿಸಲಾಯಿತು. ಸೋಂಕಿತರ ಸಂಪರ್ಕಕ್ಕೆ ಬಂದ ವ್ಯಕ್ತಿಗಳನ್ನು ಪತ್ತೆ ಹಚ್ಚಿ ಕ್ವಾರಂಟೈನ್ ಮಾಡಲಾಗಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.