ADVERTISEMENT

ಕೋಲಾರ: ಕೊರೊನಾ ವೈರಸ್ ಸೋಂಕಿತರ ಸಂಖ್ಯೆ 25ಕ್ಕೆ ಇಳಿಕೆ

​ಪ್ರಜಾವಾಣಿ ವಾರ್ತೆ
Published 5 ಫೆಬ್ರುವರಿ 2021, 5:10 IST
Last Updated 5 ಫೆಬ್ರುವರಿ 2021, 5:10 IST
ಬಂಗಾರಪೇಟೆ ತಾಲ್ಲೂಕಿನ ಬೂದಿಕೋಟೆ ಗ್ರಾಮದಲ್ಲಿ ಏರ್ಪಡಿಸಿದ್ದ ಕಂದಾಯ ಹಾಗೂ ಪಿಂಚಣಿ ಅದಾಲತ್‌ನಲ್ಲಿ ಜಿಲ್ಲಾಧಿಕಾರಿ ಸಿ. ಸತ್ಯಭಾಮ ಸಾರ್ವಜನಿಕರ ಅಹವಾಲು ಆಲಿಸಿದರು 
ಬಂಗಾರಪೇಟೆ ತಾಲ್ಲೂಕಿನ ಬೂದಿಕೋಟೆ ಗ್ರಾಮದಲ್ಲಿ ಏರ್ಪಡಿಸಿದ್ದ ಕಂದಾಯ ಹಾಗೂ ಪಿಂಚಣಿ ಅದಾಲತ್‌ನಲ್ಲಿ ಜಿಲ್ಲಾಧಿಕಾರಿ ಸಿ. ಸತ್ಯಭಾಮ ಸಾರ್ವಜನಿಕರ ಅಹವಾಲು ಆಲಿಸಿದರು    

ಕೋಲಾರ: ಜಿಲ್ಲೆಯ ಕೋವಿಡ್‌ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕೊರೊನಾ ಸೋಂಕಿತರ ಪೈಕಿ 5 ಮಂದಿ ಗುಣಮುಖರಾಗಿ ಗುರುವಾರ ಮನೆಗೆ ಮರಳಿದ್ದು, ಸಕ್ರಿಯ ಸೋಂಕಿತರ ಸಂಖ್ಯೆ 25ಕ್ಕೆ ಇಳಿಕೆಯಾಗಿದೆ.

ಕೋಲಾರ ಮತ್ತು ಕೆಜಿಎಫ್‌ ತಲಾ ಇಬ್ಬರು, ಶ್ರೀನಿವಾಸಪುರ ತಾಲ್ಲೂಕಿನ ಒಬ್ಬರನ್ನು ಆಸ್ಪತ್ರೆಯಿಂದ ಬೀಳ್ಕೊಡಲಾಯಿತು. ಹೊಸದಾಗಿ 5 ಮಂದಿಗೆ ಸೋಂಕು ಹರಡಿರುವುದು ದೃಢಪಟ್ಟಿದೆ.

ಮಾಲೂರು ತಾಲ್ಲೂಕಿನ 4 ಮಂದಿ ಹಾಗೂ ಕೋಲಾರ ತಾಲ್ಲೂಕಿನ ಒಬ್ಬರಿಗೆ ಸೋಂಕು ತಗುಲಿದೆ. ಈ ಸೋಂಕಿತರ ಮನೆ ಹಾಗೂ ಸುತ್ತಮುತ್ತಲ ಪ್ರದೇಶದಲ್ಲಿ ಸೋಂಕು ನಿವಾರಕ ದ್ರಾವಣ ಸಿಂಪಡಿಸಲಾಯಿತು. ಇವರ ಸಂಪರ್ಕಕ್ಕೆ ಬಂದ ವ್ಯಕ್ತಿಗಳನ್ನು ಪತ್ತೆ ಹಚ್ಚಿ ಕ್ವಾರಂಟೈನ್‌ ಮಾಡಲಾಗಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.