ಕೋಲಾರ: ಜಿಲ್ಲೆಯಲ್ಲಿ ಹೊಸದಾಗಿ 13 ಮಂದಿಗೆ ಕೊರೊನಾ ಸೋಂಕು ತಗುಲಿರುವುದು ಭಾನುವಾರ ದೃಢಪಟ್ಟಿದ್ದು, ಸಕ್ರಿಯ ಸೋಂಕಿತರ ಸಂಖ್ಯೆ 93ಕ್ಕೆ ಏರಿಕೆಯಾಗಿದೆ.
ಕೋಲಾರ ಮತ್ತು ಬಂಗಾರಪೇಟೆ ತಾಲ್ಲೂಕಿನ ತಲಾ ಇಬ್ಬರಿಗೆ, ಮಾಲೂರು ಹಾಗೂ ಕೆಜಿಎಫ್ ತಾಲ್ಲೂಕಿನ ತಲಾ ಒಬ್ಬರಿಗೆ, ಮುಳಬಾಗಿಲು ತಾಲ್ಲೂಕಿನ 4 ಮಂದಿಗೆ, ಶ್ರೀನಿವಾಸಪುರ ತಾಲ್ಲೂಕಿನ 3 ಮಂದಿಗೆ ಸೋಂಕು ಬಂದಿದೆ. ಈ ಸೋಂಕಿತರ ಮನೆ ಹಾಗೂ ಸುತ್ತಮುತ್ತಲ ಪ್ರದೇಶದಲ್ಲಿ ಸೋಂಕು ನಿವಾರಕ ದ್ರಾವಣ ಸಿಂಪಡಿಸಲಾಯಿತು. ಸೋಂಕಿತರ ಸಂಪರ್ಕಕ್ಕೆ ಬಂದ ವ್ಯಕ್ತಿಗಳನ್ನು ಪತ್ತೆ ಹಚ್ಚಿ ಕ್ವಾರಂಟೈನ್ ಮಾಡಲಾಗಿದೆ.
ಜಿಲ್ಲಾ ಕೇಂದ್ರದ ಕೋವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಸೋಂಕಿತರ ಪೈಕಿ 7 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಮನೆಗೆ ಮರಳಿದರು. ಕೋಲಾರ ತಾಲ್ಲೂಕಿನ 3 ಮಂದಿ, ಕೆಜಿಎಫ್ ತಾಲ್ಲೂಕಿನ ಇಬ್ಬರು, ಮುಳಬಾಗಿಲು ಮತ್ತು ಶ್ರೀನಿವಾಸಪುರ ತಾಲ್ಲೂಕಿನ ತಲಾ ಒಬ್ಬರನ್ನು ಆಸ್ಪತ್ರೆಯಿಂದ ಮನೆಗೆ ಕಳುಹಿಸಲಾಯಿತು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.