ADVERTISEMENT

ಕೋಲಾರ: ಸೋಂಕಿತರ ಸಂಖ್ಯೆ 106ಕ್ಕೆ ಏರಿಕೆ

​ಪ್ರಜಾವಾಣಿ ವಾರ್ತೆ
Published 14 ಜನವರಿ 2021, 15:25 IST
Last Updated 14 ಜನವರಿ 2021, 15:25 IST

ಕೋಲಾರ: ಜಿಲ್ಲೆಯಲ್ಲಿ ಹೊಸದಾಗಿ 5 ಮಂದಿಗೆ ಕೊರೊನಾ ಸೋಂಕು ಹರಡಿರುವುದು ಗುರುವಾರ ದೃಢಪಟ್ಟಿದ್ದು, ಸಕ್ರಿಯ ಸೋಂಕಿತರ ಸಂಖ್ಯೆ 106ಕ್ಕೆ ಏರಿಕೆಯಾಗಿದೆ.

ಮಾಲೂರು ಮತ್ತು ಬಂಗಾರಪೇಟೆ ತಾಲ್ಲೂಕಿನ ತಲಾ ಇಬ್ಬರಿಗೆ, ಕೋಲಾರ ತಾಲ್ಲೂಕಿನ ಒಬ್ಬರಿಗೆ ಸೋಂಕು ಬಂದಿದೆ. ಈ ಸೋಂಕಿತರ ಮನೆ ಹಾಗೂ ಸುತ್ತಮುತ್ತಲ ಪ್ರದೇಶದಲ್ಲಿ ಸೋಂಕು ನಿವಾರಕ ದ್ರಾವಣ ಸಿಂಪಡಿಸಲಾಯಿತು. ಸೋಂಕಿತರ ಸಂಪರ್ಕಕ್ಕೆ ಬಂದ ವ್ಯಕ್ತಿಗಳನ್ನು ಪತ್ತೆ ಹಚ್ಚಿ ಕ್ವಾರಂಟೈನ್‌ ಮಾಡಲಾಗಿದೆ.

ಜಿಲ್ಲಾ ಕೇಂದ್ರದ ಕೋವಿಡ್‌ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಸೋಂಕಿತರ ಪೈಕಿ 12 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಮನೆಗೆ ಮರಳಿದರು. ಕೋಲಾರ ತಾಲ್ಲೂಕಿನ 11 ಮತ್ತು ಮುಳಬಾಗಿಲು ತಾಲ್ಲೂಕಿನ ಒಬ್ಬರನ್ನು ಮನೆಗೆ ಕಳುಹಿಸಲಾಯಿತು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.