ADVERTISEMENT

ಪಕ್ಷ ಸಂಘಟನೆಗೆ ಸಾಂಘಿಕ ಪ್ರಯತ್ನ ಅಗತ್ಯ

ವಿಧಾನ ಪರಿಷತ್‌ ಸದಸ್ಯ ಡಾ. ವೈ.ಎ.ನಾರಾಯಣಸ್ವಾಮಿ

​ಪ್ರಜಾವಾಣಿ ವಾರ್ತೆ
Published 2 ಅಕ್ಟೋಬರ್ 2020, 2:28 IST
Last Updated 2 ಅಕ್ಟೋಬರ್ 2020, 2:28 IST
ಶ್ರೀನಿವಾಸಪುರ ಹೊರವಲಯದ ವಿಐಪಿಎಸ್ ಸಭಾಂಗಣದಲ್ಲಿ ಗುರುವಾರ ಏರ್ಪಡಿಸಿದ್ದ ತಾಲ್ಲೂಕು ಬಿಜೆಪಿ ಮುಖಂಡರ ಸಭೆಯಲ್ಲಿ ವಿಧಾನ ಪರಿಷತ್‌ ಸದಸ್ಯ ಡಾ. ವೈ.ಎ.ನಾರಾಯಣಸ್ವಾಮಿ ಮಾತನಾಡಿದರು
ಶ್ರೀನಿವಾಸಪುರ ಹೊರವಲಯದ ವಿಐಪಿಎಸ್ ಸಭಾಂಗಣದಲ್ಲಿ ಗುರುವಾರ ಏರ್ಪಡಿಸಿದ್ದ ತಾಲ್ಲೂಕು ಬಿಜೆಪಿ ಮುಖಂಡರ ಸಭೆಯಲ್ಲಿ ವಿಧಾನ ಪರಿಷತ್‌ ಸದಸ್ಯ ಡಾ. ವೈ.ಎ.ನಾರಾಯಣಸ್ವಾಮಿ ಮಾತನಾಡಿದರು   

ಶ್ರೀನಿವಾಸಪುರ: ಬಿಜೆಪಿ ಕಾರ್ಯಕರ್ತರು ಪಕ್ಷದ ಸಂಘಟನೆಗೆ ಸಾಂಘಿಕ ಪ್ರಯತ್ನ ನಡೆಸಬೇಕು. ಪಕ್ಷದ ಸಿದ್ಧಾಂತಕ್ಕೆ ಕಟ್ಟುಬಿದ್ದು ಕಾರ್ಯನಿರ್ವಹಿಸಬೇಕು ಎಂದು ವಿಧಾನ ಪರಿಷತ್‌ ಸದಸ್ಯ ಡಾ. ವೈ.ಎ.ನಾರಾಯಣಸ್ವಾಮಿ ಹೇಳಿದರು.

ಪಟ್ಟಣದ ಹೊರವಲಯದ ವಿಐಪಿಎಸ್ ಸಭಾಂಗಣದಲ್ಲಿ ಗುರುವಾರ ನಡೆದ ತಾಲ್ಲೂಕು ಬಿಜೆಪಿ ಮುಖಂಡರ ಸಭೆಯಲ್ಲಿ ಮಾತನಾಡಿದರು.

ಕಾರ್ಯಕರ್ತರು ಆಗ್ನೇಯ ಪದವೀಧರ ಕ್ಷೇತ್ರದ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯ ಗೆಲುವಿಗೆ ಶ್ರಮಿಸಬೇಕು. ಕೇಂದ್ರ ಹಾಗೂ ರಾಜ್ಯ ಸರ್ಕಾರದ ಸಾಧನೆಗಳನ್ನು ಮತದಾರರ ಗಮನಕಕ್ಕೆ ತರಬೇಕು ಎಂದು ಹೇಳಿದರು.

ADVERTISEMENT

ಆಗ್ನೇಯ ಪದವೀಧರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಚಿದಾನಂದ ಎಂ. ಗೌಡ ಮಾತನಾಡಿ, ಬಿಜೆಪಿಗೆ ಸಂಬಂಧಿಸಿದಂತೆ ಯಾವುದೇ ಬಂಡಾಯ ಇಲ್ಲ. ಕೆಲವರು ಈ ಬಗ್ಗೆ ಸುಳ್ಳು ಸುದ್ದಿ ಹಬ್ಬಿಸುತ್ತಿದ್ದಾರೆ. ಎಂದರು.

ಜಿಲ್ಲಾ ಬಿಜೆಪಿ ಘಟಕದ ಅಧ್ಯಕ್ಷ ಡಾ. ಕೆ.ಎನ್‌.ವೇಣುಗೋಪಾಲ್ ಮಾತನಾಡಿ, ‘ಪ್ರಧಾನಿ ಮೋದಿ ಅವರ ಸಮರ್ಥ ನಾಯಕತ್ವ ಹಾಗೂ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರ ಸಾಧನೆಯಿಂದ ಜನರು ಪ್ರಭಾವಿತರಾಗಿದ್ದಾರೆ. ಇಂಥ ಪರಿಸ್ಥಿತಿಯಲ್ಲಿ ಬಿಜೆಪಿ ಅಭ್ಯರ್ಥಿಯ ಗೆಲುವು ನಿಶ್ಚಿತ’ ಎಂದರು.

ಮುಖಂಡರಾದ ಜಯರಾಮರೆಡ್ಡಿ, ಅಶೋಕರೆಡ್ಡಿ, ಕೆ.ವಿ.ನಾಗರಾಜ್‌, ರೆಡ್ಡಪ್ಪ, ಬಂಗವಾದಿ ನಾಗರಾಜ್‌, ಕೊಟ್ರಗುಳಿ ನಾರಾಯಣಸ್ವಾಮಿ, ಶಿವಶಂಕರೇಗೌಡ, ನಾರಾಯಣಸ್ವಾಮಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.