ADVERTISEMENT

ಅತ್ಯಾಚಾರ: ವ್ಯಕ್ತಿಗೆ 30 ವರ್ಷ ಸಜೆ

​ಪ್ರಜಾವಾಣಿ ವಾರ್ತೆ
Published 3 ಜೂನ್ 2023, 15:57 IST
Last Updated 3 ಜೂನ್ 2023, 15:57 IST
Woman gets jail for scalding husband with boiling water as he wanted divorce
Woman gets jail for scalding husband with boiling water as he wanted divorce   

ಕೋಲಾರ: 8 ವರ್ಷದ ಬಾಲಕಿ ಮೇಲೆ ಅತ್ಯಾಚಾರವೆಸಗಿದ್ದ ಮುಳಬಾಗಿಲು ತಾಲ್ಲೂಕಿನ ಮುರಗೇಶ್‌ (32) ಎಂಬ ವ್ಯಕ್ತಿಗೆ ಇಲ್ಲಿನ ಪೋಕ್ಸೊ ವಿಶೇಷ ನ್ಯಾಯಾಲಯ 30 ವರ್ಷ ಜೈಲು ಶಿಕ್ಷೆ ವಿಧಿಸಿದೆ.

ವ್ಯಕ್ತಿಯು ಚಾಕೋಲೆಟ್‌ ಕೊಡಿಸುವುದಾಗಿ ನಂಬಿಸಿ ಮನೆಗೆ ಕರೆದುಕೊಂಡು ಹೋಗಿ ಅತ್ಯಾಚಾರ ಎಸಗಿದ್ದರ ಸಂಬಂಧ 2022ರ ಅಕ್ಟೋಬರ್‌ 9ರಂದು ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿ ತನಿಖೆ ನಡೆಸಿದ ಮುಳಬಾಗಿಲು ಗ್ರಾಮಾಂತರ ಠಾಣೆ ಪೊಲೀಸರು, ನ್ಯಾಯಾಲಯದಲ್ಲಿ ದೋಷಾರೋಪ ಪಟ್ಟಿ ಸಲ್ಲಿಸಿದ್ದರು.

ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಧೀಶ ಬಿ.ಪಿ.ದೇವಮಾನೆ ಅವರು ಶನಿವಾರ ಅಪರಾಧಿಗೆ 30 ವರ್ಷ ಜೈಲು ಶಿಕ್ಷೆ ಹಾಗೂ ₹ 50 ಸಾವಿರ ದಂಡ ವಿಧಿಸಿದ್ದಾರೆ. ಜೊತೆಗೆ ನೊಂದ ಬಾಲಕಿಗೆ ₹ 5 ಲಕ್ಷ ಪರಿಹಾರ ನೀಡಿ ಆದೇಶಿಸಿದ್ದಾರೆ. ಸರ್ಕಾರದ ಪರವಾಗಿ ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ ಡಿ.ಲಲಿತಕುಮಾರಿ ವಾದ ಮಂಡಿಸಿದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.