ADVERTISEMENT

ಕೋಲಾರ| ಕೆಪಿಎಸ್‌ಸಿ ಪರೀಕ್ಷೆಗೆ ತರಬೇತಿ

​ಪ್ರಜಾವಾಣಿ ವಾರ್ತೆ
Published 22 ಜನವರಿ 2020, 14:00 IST
Last Updated 22 ಜನವರಿ 2020, 14:00 IST

ಕೋಲಾರ: ‘ಸಂಸ್ಥೆಯು ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ಪರೀಕ್ಷೆಗೆ ಜ.27ರಿಂದ ತರಬೇತಿ ನೀಡಲಾಗುತ್ತದೆ’ ಎಂದು ವಿವೇಕ್ ಇನ್ಫೋಟೆಕ್ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ಸಂಸ್ಥೆ ವ್ಯವಸ್ಥಾಪಕ ನಿರ್ದೇಶಕ ಎ.ಪ್ರಮೋದ್‌ಕುಮಾರ್ ತಿಳಿಸಿದರು.

ಇಲ್ಲಿ ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ‘ಸ್ಪರ್ಧಾತ್ಮಕ ಪರೀಕ್ಷಾ ಆಕಾಂಕ್ಷಿಗಳ ಅನುಕೂಲಕ್ಕಾಗಿ ರಾಜ್ಯದ ಪ್ರತಿಷ್ಠಿತ ಸ್ಪರ್ಧಾತ್ಮಕ ತರಬೇತಿ ಸಂಸ್ಥೆಗಳ ಸಂಪನ್ಮೂಲ ವ್ಯಕ್ತಿಗಳನ್ನು ಕರೆಸಿ ತರಬೇತಿ ಕೊಡಿಸುತ್ತೇವೆ’ ಎಂದರು.

‘ಸ್ಪರ್ಧಾತ್ಮಕ ಪರೀಕ್ಷೆಗೆ ತರಬೇತಿ ಪಡೆಯಲು ಇಚ್ಛಿಸುವವರು ಜ.25ರಂದು ಶನಿವಾರ ಬೆಳಿಗ್ಗೆ 10ಕ್ಕೆ ಸಂಸ್ಥೆಯಲ್ಲಿ ನಡೆಯುವ ಪೂರ್ವಭಾವಿ ಪರೀಕ್ಷೆಗೆ ಹಾಜರಾಗಬೇಕು. ಪೂರ್ವಭಾವಿ ಪರೀಕ್ಷೆಯಲ್ಲಿ ಶೇ 90ಕ್ಕಿಂತ ಹೆಚ್ಚು ಅಂಕ ಗಳಿಸಿದವರಿಗೆ ಉಚಿತವಾಗಿ ತರಬೇತಿ ನೀಡಲಾಗುತ್ತದೆ’ ಎಂದು ಸಂಪನ್ಮೂಲ ವ್ಯಕ್ತಿ ಎಸ್.ಆರ್.ರಾಕೇಶ್‌ ಹೇಳಿದರು.

ADVERTISEMENT

‘ಟಿಇಟಿ, ಪೊಲೀಸ್ ಕಾನ್‌ಸ್ಟೆಬಲ್‌, ಎಸ್ಐ, ಎಫ್‌ಡಿಎ, ಎಸ್‌ಡಿಎ ಸೇರಿದಂತೆ ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಬೇತಿ ನೀಡಲಾಗಿದೆ. ಈಗಾಗಲೇ ಸಾಕಷ್ಟು ವಿದ್ಯಾರ್ಥಿಗಳು ಪರೀಕ್ಷೆಯಲ್ಲಿ ಯಶಸ್ವಿಯಾಗಿ ಸರ್ಕಾರಿ ಹುದ್ದೆಗಳಿಗೆ ಆಯ್ಕೆಯಾಗಿದ್ದಾರೆ. ಆಸಕ್ತರು ಹೆಚ್ಚಿನ ಮಾಹಿತಿಗೆ 9880791025 ಅಥವಾ 9731163835 ಮೊಬೈಲ್‌ ಸಂಖ್ಯೆ ಸಂಪರ್ಕಿಸಬಹುದು’ ಎಂದು ವಿವರಿಸಿದರು.

ಸಂಸ್ಥೆಯ ಕಾನೂನು ಸಲಹೆಗಾರ ಎ.ಶ್ರೀನಿವಾಸ್ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.