ADVERTISEMENT

ವಾಲ್ಮೀಕಿ ಜಯಂತಿ ಬಹಿಷ್ಕಾರದ ಎಚ್ಚರಿಕೆ

ಎಸ್.ಸಿ, ಎಸ್.ಟಿ ಮೀಸಲು ಹೆಚ್ಚದಿದ್ದರೆ ವಿಧಾನಸಭೆಗೆ ಮುತ್ತಿಗೆ ಬೆದರಿಕೆ

​ಪ್ರಜಾವಾಣಿ ವಾರ್ತೆ
Published 3 ಅಕ್ಟೋಬರ್ 2022, 5:21 IST
Last Updated 3 ಅಕ್ಟೋಬರ್ 2022, 5:21 IST
ಪಟ್ಟಣದ ತಾಲ್ಲೂಕು ತಹಶೀಲ್ದಾರ್ ಸಭಾಂಗಣದಲ್ಲಿ ತಾಲ್ಲೂಕು ಆಡಳಿತ ರಾಷ್ಟ್ರೀಯ ಹಬ್ಬಗಳ ಆಚರಣೆ ಸಮಿತಿ ಅಕ್ಟೋಬರ್ 9ರಂದು ಹಮ್ಮಿಕೊಳ್ಳಲಿರುವ ವಾಲ್ಮೀಕಿ ಜಯಂತಿ ಹಿನ್ನೆಲೆಯಲ್ಲಿ ಭಾನುವಾರ ಪೂರ್ವಭಾವಿ ಸಭೆ ನಡೆಸಿತು
ಪಟ್ಟಣದ ತಾಲ್ಲೂಕು ತಹಶೀಲ್ದಾರ್ ಸಭಾಂಗಣದಲ್ಲಿ ತಾಲ್ಲೂಕು ಆಡಳಿತ ರಾಷ್ಟ್ರೀಯ ಹಬ್ಬಗಳ ಆಚರಣೆ ಸಮಿತಿ ಅಕ್ಟೋಬರ್ 9ರಂದು ಹಮ್ಮಿಕೊಳ್ಳಲಿರುವ ವಾಲ್ಮೀಕಿ ಜಯಂತಿ ಹಿನ್ನೆಲೆಯಲ್ಲಿ ಭಾನುವಾರ ಪೂರ್ವಭಾವಿ ಸಭೆ ನಡೆಸಿತು   

ಮಾಲೂರು: ರಾಜ್ಯ ಸರ್ಕಾರ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗಗಳಿಗೆಮೀಸಲಾತಿ ಹೆಚ್ಚಿಸದಿದ್ದರೆ,ಇದೇ 9ರಂದು ನಡೆಯಲಿರುವವಾಲ್ಮೀಕಿ ಜಯಂತಿ ಬಹಿಷ್ಕರಿಸುವುದಾಗಿ ವಾಲ್ಮೀಕಿ ಗುರುಪೀಠದ ಧರ್ಮದರ್ಶಿಎನ್. ವೆಂಕಟರಾಮ್ ಹಾಗೂ ಅಖಿಲ ಕರ್ನಾಟಕ ವಾಲ್ಮೀಕಿ ಮಹಾಸಭಾ ರಾಜ್ಯ ಸದಸ್ಯ ಸಂಚಿಕೆ ನಾರಾಯಣಪ್ಪ ಎಚ್ಚರಿಕೆ ನೀಡಿದರು.

ಪಟ್ಟಣದ ತಾಲೂಕು ಕಚೇರಿಯ ತಹಶೀಲ್ದಾರ್ ಸಭಾಂಗಣದಲ್ಲಿ ತಾಲ್ಲೂಕು ಆಡಳಿತ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯಿಂದ ಇದೇ ಅಕ್ಟೋಬರ್ 9ರಂದು ವಾಲ್ಮೀಕಿ ಜಯಂತಿ ಆಚರಿಸಲಾಗುತ್ತಿದ್ದು, ಈಹಿನ್ನೆಲೆಯಲ್ಲಿ ಭಾನುವಾರ ಪೂರ್ವಭಾವಿ ಸಭೆ ನಡೆಯಿತು.

ಈ ಸಭೆಯಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗಗಳ ಜನಸಂಖ್ಯೆಗೆ ಅನುಗುಣವಾಗಿ ನ್ಯಾಯಮೂರ್ತಿ ಎಚ್.ಎನ್ ನಾಗಮೋಹನ್ ದಾಸ್ ಸರ್ಕಾರಕ್ಕೆ ಸಲ್ಲಿಸಿದ ವರದಿಯಂತೆ ಅಕ್ಟೋಬರ್ 5ರ ಒಳಗೆ ಶಿಕ್ಷಣ ಮತ್ತು ಉದ್ಯೋಗದಲ್ಲಿ ಮೀಸಲಾತಿ ಹೆಚ್ಚಿಸಿ ಆದೇಶಿಸಬೇಕು. ಇಲ್ಲದಿದ್ದರೆ,ವಾಲ್ಮೀಕಿ ಸಮುದಾಯದ ಗುರುಪೀಠದ ಪ್ರಸನ್ನಾನಂದ ಸ್ವಾಮಿ ನೇತೃತ್ವದಲ್ಲಿ ತಾಲ್ಲೂಕು ಮತ್ತು ಜಿಲ್ಲಾ ಆಡಳಿತ ಹಮ್ಮಿಕೊಳ್ಳುವ ವಾಲ್ಮೀಕಿ ಜಯಂತಿ ಬಹಿಷ್ಕರಿಸಿ, ವಿಧಾನಸಭೆಗೆ ಮುತ್ತಿಗೆ ಹಾಕಲಾಗುತ್ತದೆ. ಜೊತೆಗೆ ಕಪ್ಪುಪಟ್ಟಿ ಧರಿಸಿ ವಾಲ್ಮೀಕಿ ಜಯಂತಿ ಆಚರಿಸಲಾಗುತ್ತದೆ ಎಂದು ಅಖಿಲ ಕರ್ನಾಟಕ ವಾಲ್ಮೀಕಿ ಮಹಾಸಭಾ ಎಚ್ಚರಿಸಿದೆ. ಈ ಕುರಿತು ವಾಲ್ಮೀಕಿ ಸಮುದಾಯದ ಗುರುಪೀಠದ ಪ್ರಸನ್ನಾನಂದ ಸ್ವಾಮೀಜಿ ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನದಲ್ಲಿ ನಡೆಸುತ್ತಿರುವ ಅಹೋರಾತ್ರಿ ಹೋರಾಟ 231 ದಿನ ಪೂರೈಸಿದೆ.

ADVERTISEMENT

ಪರಿಶಿಷ್ಟ ಜಾತಿ ಮತ್ತು ಪಂಗಡದ ಜನತೆಗೆ ಅನುಗುಣವಾಗಿಪರಿಶಿಷ್ಟ ಜಾತಿಗೆ ಶೇ15ರಿಂದ 17 ಮತ್ತುಪಂಗಡಕ್ಕೆ ಶೇ3ರಿಂದ 7.5ಮೀಸಲಾತಿ ಹೆಚ್ಚಳ ಮಾಡಬೇಕು ಎಂದುನ್ಯಾ. ಎಚ್.ಎನ್.ನಾಗಮೋಹನ್ ದಾಸ್ ಅವರು ಸರ್ಕಾರಕ್ಕೆ ವರದಿ ನೀಡಿ 2 ವರ್ಷಗಳೇ ಕಳೆದಿವೆ. ಆದರೆ, ಸರ್ಕಾರ ಇನ್ನೂ ಮೀಸಲಾತಿ ಹೆಚ್ಚಿಸದೆವಂಚಿಸುತ್ತಿದೆ ಎಂದು ದೂರಿದರು.

ಕೇಂದ್ರ ಮಂತ್ರಿಗಳು, ರಾಜ್ಯ ಮುಖ್ಯಮಂತ್ರಿ ಹಾಗೂ ರಾಜ್ಯ ಸಚಿವರು ಅಹೋರಾತ್ರಿ ಪ್ರತಿಭಟನೆ ನಡೆಸುತ್ತಿರುವ ಸ್ಥಳಕ್ಕೆ ಭೇಟಿ ನೀಡಿ ಶೀಘ್ರವೇ ಮೀಸಲಾತಿ ಹೆಚ್ಚಿಸುವ ಭರವಸೆ ನೀಡಿದ್ದಾರೆ. ಈವರೆಗೆ ಮೀಸಲಾತಿ ಹೆಚ್ಚಳ ಮಾಡುವಲ್ಲಿ ವಿಳಂಬ ಧೋರಣೆ
ಅನುಸರಿಸಲಾಗುತ್ತಿದೆ ಎಂದು ಬೇಸರ ವ್ಯಕ್ತಪಡಿಸಿದರು.

ಪುರಸಭಾ ಅಧ್ಯಕ್ಷ ಭವ್ಯ ಶಂಕರ್, ಉಪಾಧ್ಯಕ್ಷ ಭಾರತ ಶಂಕ್ರಪ್ಪ, ತಹಶೀಲ್ದಾರ್ ಮಲ್ಲಿಕಾರ್ಜುನ್, ತಾ.ಪಂ ಇ.ಒ ಮುನಿರಾಜು, ಸಾಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಶಿವಕುಮಾರ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಂ.ಜಿ. ಮಧುಸೂದನ್, ವಿಜಯ ನರಸಿಂಹ, ವಾಲ್ಮೀಕಿ ನಾಯಕ ಸಂಘದ ಅಧ್ಯಕ್ಷ ಅಬ್ಬಯ್ಯಪ್ಪ, ಪ್ರಧಾನ ಕಾರ್ಯದರ್ಶಿ ಗುಂಡಪ್ಪ, ನಲ್ಲಂಡಳ್ಳಿ ನಾಗರಾಜ್, ಮದಕರಿ ನಾಯಕ ಸಂಘದ ಅಧ್ಯಕ್ಷ ವಾಟರ್ ನಾರಾಯಣಸ್ವಾಮಿ, ವಾಲ್ಮೀಕಿ ನಾಯಕ ಸಹಕಾರ ಸಂಘದ ಅಧ್ಯಕ್ಷ ಚಿಕ್ಕ ತಿಮ್ಮರಾಯಪ್ಪ, ವಾಲ್ಮೀಕಿ ನಾಯಕ ಯುವ ವೇದಿಕೆ ಅಧ್ಯಕ್ಷ ಟಿ ಕೆ ನಾಗರಾಜ್, ವಾಲ್ಮೀಕಿ ನಾಯಕ ವೇಧಿಕೆ ಕಾರ್ಯಾಧ್ಯಕ್ಷ ವೆಂಕಟೇಶ್ ನಾಯಕ್, ವಾಲ್ಮೀಕಿ ನಾಯಕ ಮಹಾಸಭಾ ತಾ.ಅಧ್ಯಕ್ಷ ಎಂ.ನಾರಾಯಣಪ್ಪ, ಮುಖಂಡರುಗಳಾದ ಟಿ.ವಿ.ನಂಜುAಡಪ್ಪ, ಸೋಣಪನಟ್ಟಿ ನಾರಾಯಣಸ್ವಾಮಿ, ತಿಮ್ಮರಾಯಪ್ಪ, ತಾಳಕುಂಟೆ ಮುನಿರಾಜು, ಇನ್ನಿತರರು ಹಾಜರಿದ್ದರು.

ಮೀಸಲಿಗೆ ಸಮ್ಮತಿ: ಶಾಸಕ

ಸಭೆಯಲ್ಲಿ ಶಾಸಕ ಕೆ.ವೈ.ನಂಜೇಗೌಡ ಮಾತನಾಡಿ, ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಮೀಸಲಾತಿ ಹೆಚ್ಚಳಕ್ಕಾಗಿ ಇತ್ತೀಚಿಗೆ ನಡೆದ ಅಧಿವೇಶನದ ಸದನದಲ್ಲಿ ಪ್ರಶ್ನೆ ಕೇಳಲು ಮುಂದಾಗಿದ್ದೆ. ಆದರೆ, ಈ ವಿಚಾರ ಪ್ರಸ್ತಾಪವಾಗಲು ಸಮಯ ನೀಡಲಿಲ್ಲ ಎಂದು ಹೇಳಿದರು.

ಆದಾಗ್ಯೂ,ಸದನದಲ್ಲಿ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರೊಂದಿಗೆ ಸದನದ ಬಾವಿಗಿಳಿದು ಸರ್ಕಾರದ ಗಮನ ಸೆಳೆಯಲು ಪ್ರಯತ್ನಿಸಿದ್ದೆ. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಸಮುದಾಯ ಮೀಸಲಾತಿಗೆ ನಡೆಸುತ್ತಿರುವ ಹೋರಾಯಕ್ಕೆ ನನ್ನ ಬೆಂಬಲವೂ ಇದೆ.ಮುಂದಿನ ದಿನಗಳಲ್ಲಿಈ ವಿಚಾರಕ್ಕೆ ಸದನದ ಹೊರಗೆ ಮತ್ತು ಒಳಗೆ ನಡೆಯುವ ಹೋರಾಟಕ್ಕೆ ಸಹಕಾರ ನೀಡುವುದಾಗಿ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.