ಕೋಲಾರ: ಮಾಜಿ ಸಚಿವ ವರ್ತೂರು ಪ್ರಕಾಶ್ ಅಪಹರಣ ಪ್ರಕರಣದ ಪ್ರಮುಖ ಆರೋಪಿ ಕವಿರಾಜ್ ಎಂಬಾತನನ್ನು ಪೊಲೀಸರು ಶನಿವಾರ ಬಂಧಿಸಿದ್ದು, ಆರೋಪಿಗಳ ಸಂಖ್ಯೆ 7ಕ್ಕೆ ಏರಿಕೆಯಾಗಿದೆ.
ವರ್ತೂರು ಪ್ರಕಾಶ್ ಅವರಿಗೆ ಪರಿಚಿತನಾಗಿದ್ದ ಕವಿರಾಜ್ ಘಟನೆ ನಂತರ ತಮಿಳುನಾಡಿಗೆ ಹೋಗಿ ತಲೆಮರೆಸಿಕೊಂಡಿದ್ದ. ಪ್ರಕರಣ ಸಂಬಂಧ ಬಂಧಿಸಲಾದ ಇತರೆ ಆರೋಪಿಗಳು ನೀಡಿದ ಮಾಹಿತಿ ಹಾಗೂ ಕವಿರಾಜ್‌ನ ಮೊಬೈಲ್ ಕರೆಗಳ ವಿವರ ಆಲಿಸಿ ಆತನನ್ನು ಪತ್ತೆ ಹಚ್ಚಲಾಯಿತು ಎಂದು ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ.
ಪ್ರಕರಣದ ಮತ್ತೊಬ್ಬ ಪ್ರಮುಖ ಆರೋಪಿ ತಲೆಮರೆಸಿಕೊಂಡಿದ್ದು, ಆತನ ಪತ್ತೆ ಕಾರ್ಯ ಮುಂದುವರಿದಿದೆ. ಆತನನ್ನು ಸದ್ಯದಲ್ಲೇ ಬಂಧಿಸುತ್ತೇವೆ ಎಂದು ಅಧಿಕಾರಿಗಳು ಹೇಳಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.