ಶ್ರೀನಿವಾಸಪುರ: ಪಟ್ಟಣದ ಕನ್ಯಕಾ ಪರಮೇಶ್ವರಿ ದೇವಾಲಯದಲ್ಲಿ ಬುಧವಾರ ವಾಸವಿ ಜಯಂತಿ ಆಚರಿಸಲಾಯಿತು. ಜಯಂತಿ ಅಂಗವಾಗಿ ಹಲವಾರು ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
ದೇವಾಲಯದ ಸಭಾಂಗಣದಲ್ಲಿ ಗಣಪತಿ ಹೋಮ, ವಾಸವಿ ಹೋಮ ನೆರವೇರಿಸಲಾಯಿತು. ದೇವಿ ವಿಗ್ರಹಕ್ಕೆ ವಿಶೇಷ ಅಲಂಕಾರ ಮಾಡಲಾಗಿತ್ತು. ಆರ್ಯ ವೈಶ್ಯ ಸಮುದಾಯದ ಮಹಿಳೆಯರಿಂದ ವಾಸವಿ ಗೀತೆಗಳ ಗಾಯನ ಏರ್ಪಡಿಸಲಾಗಿತ್ತು.
ಜಯಂತಿ ಪ್ರಯುಕ್ತ ಆರ್ಯ ವೈಶ್ಯರು ಅಂಗಡಿ ಮುಂಗಟ್ಟು ಮುಚ್ಚಿ ಸಮಾರಂಭದಲ್ಲಿ ಭಾಗವಹಿಸಿದ್ದರು. ಸಾಮೂಹಿಕ ಭೋಜನ ವ್ಯವಸ್ಥೆ ಮಾಡಲಾಗಿತ್ತು. ರಾತ್ರಿ ವಾಸವಿ ಉತ್ಸವ ಮೂರ್ತಿ ಮೆರವಣಿಗೆ ಏರ್ಪಡಿಸಲಾಗಿತ್ತು.
ಮಾಜಿ ಶಾಸಕ ಜಿ.ಕೆ. ವೆಂಕಟಶಿವಾರೆಡ್ಡಿ, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ತೂಪಲ್ಲಿ ಆರ್. ನಾರಾಯಣಸ್ವಾಮಿ, ಮುಖಂಡರಾದ ಪೂಲ ಶಿವಾರೆಡ್ಡಿ, ವೈ.ಆರ್. ಶಿವಪ್ರಕಾಶ್, ಎಸ್.ಆರ್. ಅಮರನಾಥ್, ಕೆ.ವಿ. ಸೂರ್ಯನಾರಾಯಣಶೆಟ್ಟಿ, ವೈ.ಆರ್. ನಾಗೇಂದ್ರ ಬಾಬು ಇದ್ದರು
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.