ಕೋಲಾರ: ಐಎಎಸ್ ಅಧಿಕಾರಿ ವೆಂಕಟರಾಜು ಅವರನ್ನು ನೂತನ ಜಿಲ್ಲಾಧಿಕಾರಿಯಾಗಿ ನೇಮಿಸಿ ರಾಜ್ಯ ಸರ್ಕಾರ ಸೋಮವಾರ ಆದೇಶ ಹೊರಡಿಸಿದೆ.
2013ರ ಬ್ಯಾಚ್‌ನ ಐಎಎಸ್ ಅಧಿಕಾರಿಯಾದ ವೆಂಕಟರಾಜು ಅಬಕಾರಿ ಇಲಾಖೆಯಲ್ಲಿ ಹೆಚ್ಚುವರಿ ಆಯುಕ್ತರಾಗಿ ಕಾರ್ಯ ನಿರ್ವಹಿಸುತ್ತಿದ್ದರು. ಹಿಂದಿನ ಜಿಲ್ಲಾಧಿಕಾರಿ ಆರ್.ಸೆಲ್ವಮಣಿ ಅವರನ್ನು ಶಿವಮೊಗ್ಗ ಜಿಲ್ಲೆಗೆ ವರ್ಗಾವಣೆ ಮಾಡಿದ ನಂತರ ಹಲವು ದಿನಗಳಿಂದ ಜಿಲ್ಲಾಧಿಕಾರಿ ಹುದ್ದೆ ಖಾಲಿಯಿತ್ತು.
ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಯುಕೇಶ್‌ಕುಮಾರ್ ಅವರು ಪ್ರಭಾರವಾಗಿ ಜಿಲ್ಲಾಧಿಕಾರಿ ಹುದ್ದೆಯ ಜವಾಬ್ದಾರಿ ನಿಭಾಯಿಸುತ್ತಿದ್ದರು. ಕಳೆದೊಂದು ತಿಂಗಳಲ್ಲಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವರ್ಗಾವಣೆಗೊಂಡು ಜಿಲ್ಲೆಗೆ ಬಂದಿದ್ದು, ಹೊಸ ಅಧಿಕಾರಿಗಳ ಮೇಲೆ ಜನರ ನಿರೀಕ್ಷೆ ಹೆಚ್ಚಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.