ADVERTISEMENT

‘ಅಂಬೇಡ್ಕರ್‌ ಹಾದಿಯಲ್ಲಿ ನಡೆಯಿರಿ’

​ಪ್ರಜಾವಾಣಿ ವಾರ್ತೆ
Published 11 ಅಕ್ಟೋಬರ್ 2021, 2:23 IST
Last Updated 11 ಅಕ್ಟೋಬರ್ 2021, 2:23 IST
ಕೆಜಿಎಫ್‌ ರಾಬರ್ಟಸನ್‌ಪೇಟೆಯಲ್ಲಿ ಪರಿಶಿಷ್ಟ ಜಾತಿ, ಪಂಗಡದ ನೌಕರರ ಸಂಘ ಏರ್ಪಡಿಸಿದ್ದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ರುಪ್ಸಾ ಉಪಾಧ್ಯಕ್ಷ ಮುನಿಯಪ್ಪ, ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ಶಿವಕುಮಾರ್‌, ಸರ್ಕಲ್‌ ಇನ್‌ಸ್ಪೆಕ್ಟರ್ ನಾಗರಾಜ್‌, ರವಿರೆಡ್ಡಿ ಇದ್ದರು
ಕೆಜಿಎಫ್‌ ರಾಬರ್ಟಸನ್‌ಪೇಟೆಯಲ್ಲಿ ಪರಿಶಿಷ್ಟ ಜಾತಿ, ಪಂಗಡದ ನೌಕರರ ಸಂಘ ಏರ್ಪಡಿಸಿದ್ದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ರುಪ್ಸಾ ಉಪಾಧ್ಯಕ್ಷ ಮುನಿಯಪ್ಪ, ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ಶಿವಕುಮಾರ್‌, ಸರ್ಕಲ್‌ ಇನ್‌ಸ್ಪೆಕ್ಟರ್ ನಾಗರಾಜ್‌, ರವಿರೆಡ್ಡಿ ಇದ್ದರು   

ಕೆಜಿಎಫ್‌: ಪರಿಶಿಷ್ಟ ಜಾತಿ ಮತ್ತು ವರ್ಗದ ಮಕ್ಕಳು ಮೀಸಲಾತಿಗೆ ಆಸೆ ಪಡದೆ ಸಾಮಾನ್ಯ ವರ್ಗದಲ್ಲಿ ಅರ್ಹತೆ ಪಡೆದು ಸಾಮರ್ಥ್ಯ ತೋರಬೇಕು ಎಂದು ರಾಜ್ಯ ಖಾಸಗಿ ಶಾಲೆಗಳ ಒಕ್ಕೂಟದ (ರುಪ್ಸಾ) ಉಪಾಧ್ಯಕ್ಷ ಮುನಿಯಪ್ಪ ಹೇಳಿದರು.

ತಾಲ್ಲೂಕು ಎಸ್‌ಸಿ ಮತ್ತು ಎಸ್‌ಟಿ ನೌಕರರ ಸಂಘ ಇತ್ತೀಚೆಗೆಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅತಿಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಸನ್ಮಾನಿಸಿ ಮಾತನಾಡಿದರು.

ಅಂಬೇಡ್ಕರ್ ತೋರಿದ ಹಾದಿಯಲ್ಲಿ ನಡೆಯಬೇಕು. ಸರ್ಕಾರ ಸಾಕಷ್ಟು ಸವಲತ್ತು ವಿದ್ಯಾರ್ಥಿಗಳಿಗೆ ನೀಡುತ್ತಿದೆ. ಪ್ರತಿಭಾವಂತರು ವಿದೇಶದಲ್ಲಿ ಕೂಡ ಸರ್ಕಾರಿ ಖರ್ಚಿನಲ್ಲಿ ವ್ಯಾಸಂಗ ಮಾಡುವ ಅವಕಾಶ ಇದೆ ಎಂದರು.

ADVERTISEMENT

ಕ್ಷೇತ್ರ ಶಿಕ್ಷಣಾಧಿಕಾರಿ ಕೆಂಪಯ್ಯ ಮಾತನಾಡಿ, ವಿದ್ಯಾರ್ಥಿಗಳು ಟಿ.ವಿ, ಮೊಬೈಲ್‌ಗಳಿಂದ ದೂರವಿರಬೇಕು. ಶಿಕ್ಷಣದ ಜತೆಗೆ ಪಠ್ಯೇತರ ಚಟುವಟಿಕೆ ಕೂಡ ನಡೆಸಬೇಕು ಎಂದರು.

ನಗರಸಭೆ ವ್ಯವಸ್ಥಾಪಕ ನಂಜುಂಡಸ್ವಾಮಿ, ಜಿಲ್ಲಾಶಸ್ತ್ರ ಚಿಕಿತ್ಸಕ ಡಾ.ಶಿವಕುಮಾರ್, ಸರ್ಕಲ್‌ ಇನ್‌ಸ್ಪೆಕ್ಟರ್ ನಾಗರಾಜ್‌, ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ರವಿರೆಡ್ಡಿ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ವಿನೋದ್ ಬಾಬು, ವಿವಿಧ ಇಲಾಖೆಯ ಅಶ್ವಥ್‌, ಮುನಿರಾಜು, ಸಂಪಂಗಿ, ರಂಗನಾಥ್‌, ಸರಸ್ವತಿ, ಶ್ರೀಧರ್‌, ನಟರಾಜ್‌ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.