ADVERTISEMENT

ಮಾವು ವಿಮೆ; ನೋಂದಣಿಗೆ ನಾಳೆ ಕೊನೆ

​ಪ್ರಜಾವಾಣಿ ವಾರ್ತೆ
Published 30 ಜುಲೈ 2025, 5:01 IST
Last Updated 30 ಜುಲೈ 2025, 5:01 IST
   

ಕೋಲಾರ: 2025-26ನೇ ಸಾಲಿನ ಮುಂಗಾರು ಹಂಗಾಮಿನ ಮರು ವಿನ್ಯಾಸಗೊಳಿಸಲಾದ ಹವಾಮಾನ ಆಧಾರಿತ ಬೆಳೆ ವಿಮೆ ಯೋಜನೆ ವ್ಯಾಪ್ತಿಗೆ ಜಿಲ್ಲೆಯ ಬಂಗಾರಪೇಟೆ, ಕೆ.ಜಿ.ಎಫ್. ಕೋಲಾರ, ಮಾಲೂರು, ಮುಳಬಾಗಿಲು ಮತ್ತು ಶ್ರೀನಿವಾಸಪುರ ತಾಲ್ಲೂಕುಗಳನ್ನು ಒಳಪಡಿಸಲಾಗಿದೆ.

ಮಾವು ಬೆಳೆಗೆ ಪ್ರತಿ ಹೆಕ್ಟೇರ್ ವಿಮಾ ಮೊತ್ತ ₹ 80 ಸಾವಿರಗಳಾಗಿದ್ದು, ರೈತರು ಪಾವತಿಸಬೇಕಾದ ವಿಮಾಕಂತಿನ ಮೊತ್ತ ಶೇ 5 ಅಂದರೆ ₹ 4 ಸಾವಿರ ಆಗಿರುತ್ತದೆ. ಅರ್ಜಿಯೊಂದಿಗೆ ಪಹಣಿ, ಬ್ಯಾಂಕ್ ಖಾತೆ ಪಾಸ್ ಪುಸ್ತಕ, ಆಧಾರ್‌ ಪ್ರತಿ ಲಗತ್ತಿಸಿ ಖಾತೆ ಹೊಂದಿರುವ ರಾಷ್ಟ್ರೀಕೃತ ಬ್ಯಾಂಕ್‍ಗಳಲ್ಲಿ ಅಥವಾ ಗ್ರಾಮ ಒನ್ ಕೇಂದ್ರಗಳಲ್ಲಿ ಅಥವಾ ಸಾಮಾನ್ಯ ಸೇವಾ ಕೇಂದ್ರಗಳಲ್ಲಿ ವಿಮೆ ಯೋಜನೆಯಡಿ ಜುಲೈ 31 ರೊಳಗೆ ನೋಂದಾಯಿಸಿಕೊಳ್ಳಬಹುದು.

ಮಾಹಿತಿಗೆ ಬಂಗಾರಪೇಟೆ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರ, ದೂ: 9845024906. ಕೋಲಾರ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು, ದೂ: 9448949104. ಮಾಲೂರು ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು, ದೂ: 9448955801. ಮುಳಬಾಗಿಲು ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು, ದೂ: 8073334003 ಮತ್ತು ಶ್ರೀನಿವಾಸಪುರ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು, ದೂ: 9008059912 ಸಂಪರ್ಕಿಸಬಹುದೆಂದು ತೋಟಗಾರಿಕೆ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.