ADVERTISEMENT

ಕೋಲಾರ: ಬೈಕ್‌ ವ್ಹೀಲಿಂಗ್‌ ಮಾಡುತ್ತಿದ್ದವರಿಂದ ಪೊಲೀಸರ ಮೇಲೆ ಹಲ್ಲೆಗೆ ಯತ್ನ

​ಪ್ರಜಾವಾಣಿ ವಾರ್ತೆ
Published 29 ಏಪ್ರಿಲ್ 2022, 14:48 IST
Last Updated 29 ಏಪ್ರಿಲ್ 2022, 14:48 IST
ಕೋಲಾರ ಹೊರವಲಯದ ಕೊಂಡರಾಜನಹಳ್ಳಿ ಬಳಿ ಗುರುವಾರ ರಾತ್ರಿ ಬೈಕ್‌ ವ್ಹೀಲಿಂಗ್‌ ಮಾಡುತ್ತಿದ್ದ ಸವಾರರನ್ನು ತಡೆದು ಪೊಲೀಸರು ಜಪ್ತಿ ಮಾಡಿರುವ ಬೈಕ್‌ಗಳು
ಕೋಲಾರ ಹೊರವಲಯದ ಕೊಂಡರಾಜನಹಳ್ಳಿ ಬಳಿ ಗುರುವಾರ ರಾತ್ರಿ ಬೈಕ್‌ ವ್ಹೀಲಿಂಗ್‌ ಮಾಡುತ್ತಿದ್ದ ಸವಾರರನ್ನು ತಡೆದು ಪೊಲೀಸರು ಜಪ್ತಿ ಮಾಡಿರುವ ಬೈಕ್‌ಗಳು   

ಕೋಲಾರ: ನಗರದ ಹೊರವಲಯದ ರಾಷ್ಟ್ರೀಯ ಹೆದ್ದಾರಿ 75ರ ಕೊಂಡರಾಜನಹಳ್ಳಿ ಬಳಿ ಗುರುವಾರ ರಾತ್ರಿ ಬೈಕ್‌ ವ್ಹೀಲಿಂಗ್‌ ಮಾಡುತ್ತಿದ್ದ ಸವಾರರು ಪೊಲೀಸರ ಮೇಲೆ ಹಲ್ಲೆಗೆ ಯತ್ನಿಸಿದ್ದು, ಕೋಲಾರ ಗ್ರಾಮಾಂತರ ಠಾಣೆ ಪೊಲೀಸರು ಆ ಸವಾರರ ವಿರುದ್ಧ ಪ್ರಕರಣ ದಾಖಲಿಸಿ 10 ಬೈಕ್‌ ಜಪ್ತಿ ಮಾಡಿದ್ದಾರೆ.

ರಾಷ್ಟ್ರೀಯ ಹೆದ್ದಾರಿ 75ರಲ್ಲಿ ರಾತ್ರಿ ಗಸ್ತು ನಡೆಸುತ್ತಿದ್ದ ಪೊಲೀಸರು ವ್ಹೀಲಿಂಗ್‌ ಮಾಡುತ್ತಿದ್ದ ಬೈಕ್‌ ಸವಾರರನ್ನು ತಡೆದರು. ಇದರಿಂದ ಆಕ್ರೋಶಗೊಂಡ ಬೈಕ್‌ ಸವಾರರು ಪೊಲೀಸರ ಜತೆ ವಾಗ್ವಾದ ನಡೆಸಿ ಹಲ್ಲೆಗೆ ಯತ್ನಿಸಿದ್ದಾರೆ.

ಬಳಿಕ ಪೊಲೀಸರು ಠಾಣೆಯಿಂದ ಹೆಚ್ಚಿನ ಸಿಬ್ಬಂದಿಯನ್ನು ಸ್ಥಳಕ್ಕೆ ಕರೆಸಿಕೊಂಡು ಬೈಕ್‌ ಸವಾರರ ವಿರುದ್ಧ ಕರ್ತವ್ಯ ನಿರ್ವಹಣೆಗೆ ಅಡ್ಡಿ, ಹಲ್ಲೆ ಯತ್ನ ಮತ್ತು ನಿರ್ಲಕ್ಷ್ಯದ ಚಾಲನೆ ಆರೋಪದಡಿ ಪ್ರಕರಣ ದಾಖಲಿಸಿದ್ದಾರೆ. ಅಲ್ಲದೇ, ಅವರ ಬೈಕ್‌ಗಳನ್ನು ವಶಪಡಿಸಿಕೊಂಡಿದ್ದಾರೆ.

ADVERTISEMENT

ವ್ಹೀಲಿಂಗ್‌ ಮಾಡುತ್ತಿದ್ದ ಬೈಕ್‌ ಸವಾರರ ಪೈಕಿ ಕೆಲವರು ಪೊಲೀಸರನ್ನು ಕಂಡು ಗಾಬರಿಯಾಗಿ ಬೈಕ್‌ ಸಮೇತ ಪರಾರಿಯಾಗಿದ್ದಾರೆ. ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಡಿ.ದೇವರಾಜ್‌ ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.