ADVERTISEMENT

ಕೋಲಾರ | ಕಾಡುಹಂದಿ ದಾಳಿ: ಮಹಿಳೆಗೆ ಗಾಯ

​ಪ್ರಜಾವಾಣಿ ವಾರ್ತೆ
Published 2 ನವೆಂಬರ್ 2025, 6:33 IST
Last Updated 2 ನವೆಂಬರ್ 2025, 6:33 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಕೋಲಾರ: ತಾಲ್ಲೂಕಿನ ಜಡೇರಿ ಗ್ರಾಮದ ಬಳಿ ರೈತ ಮಹಿಳೆಯೊಬ್ಬರ ಮೇಲೆ ಕಾಡುಹಂದಿ ದಾಳಿ ಮಾಡಿ ಗಾಯಗೊಳಿಸಿದೆ.

ಗ್ರಾಮದ ದೇವಮ್ಮ (45) ಗಾಯಗೊಂಡವರು ಎಂಬುದು ಗೊತ್ತಾಗಿದೆ. ಮಾವಿನ ತೋಟದಲ್ಲಿ ಎಮ್ಮೆ ಮೇಯಿಸುವಾಗ ಕಾಡುಹಂದಿ ದಾಳಿ ನಡೆಸಿದೆ ಎಂಬುದು ತಿಳಿದುಬಂದಿದೆ. ಗಾಯಗೊಂಡಿರುವ ಮಹಿಳೆಯನ್ನು ಕೋಲಾರದ ಆಸ್ಪತ್ರೆಗೆ ದಾಖಲಿಸಲಾಗಿದೆ.

ಗ್ರಾಮದ ಸುತ್ತಮುತ್ತ ಕಾಡುಹಂದಿಗಳ ಕಾಟ ಹೆಚ್ಚಿದ್ದು, ಸೂಕ್ತ ಕ್ರಮ ವಹಿಸಬೇಕೆಂದು ಗ್ರಾಮಸ್ಥರು ಅರಣ್ಯಾಧಿಕಾರಿಗಳಿಗೆ ಒತ್ತಾಯಿಸಿದ್ದಾರೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.