ADVERTISEMENT

ಕೋಲಾರ: ಪ್ರಿಯಕರನ ಜೊತೆ ಸೇರಿ ಪತಿ, ಗಾಯಕ ಜನ್ನಘಟ್ಟ ಕೃಷ್ಣಮೂರ್ತಿ ಕೊಲೆ

​ಪ್ರಜಾವಾಣಿ ವಾರ್ತೆ
Published 30 ಮೇ 2023, 10:25 IST
Last Updated 30 ಮೇ 2023, 10:25 IST
   

ಕೋಲಾರ: ಪ್ರಿಯಕರನ ಜೊತೆಗೂಡಿ ಸೋಮವಾರ ರಾತ್ರಿ ತಾಲ್ಲೂಕಿನ ಕನ್ನಘಟ್ಟ ಬಳಿ ಪತಿ ಹಾಗೂ ಜಾನಪದ ಗಾಯಕ ಜನ್ನಘಟ್ಟ ಕೃಷ್ಣಮೂರ್ತಿ ಅವರನ್ನು ಕೊಲೆ ಮಾಡಿರುವ ಆರೋಪ‌ ಸಂಬಂಧ ಪತ್ನಿ ಸೇರಿದಂತೆ ‌ಮೂವರನ್ನು ಪೊಲೀಸರು ಮಂಗಳವಾರ ವಶಕ್ಕೆ ‌ಪಡೆದಿದ್ದಾರೆ.

ಜನ್ನಘಟ್ಟ ಕೃಷ್ಣಮೂರ್ತಿ ‌ಪತ್ನಿ ಸೌಮ್ಯಾ, ಆಕೆಯ ಪ್ರಿಯಕರ ಶ್ರೀನಿವಾಸಪುರದ ಶ್ರೀಧರ್, ಆತನ ಗೆಳೆಯ ‌ಶ್ರೀಧರ್ ಎಂಬ ಆರೋಪಿಗಳ‌ ಮೇಲೆ ಪ್ರಕರಣ ದಾಖಲಿಸಿರುವ ಕೋಲಾರ ಗ್ರಾಮಾಂತರ ಪೊಲೀಸರು ವಿಚಾರಣೆಗೆ ನಡೆಸುತ್ತಿದ್ದಾರೆ.

ಕೊಲೆ ಮಾಡಿ ರೈಲ್ವೆ ಗೇಟ್ ಬಳಿ ದ್ವಿಚಕ್ರ ವಾಹನದಲ್ಲಿ ಬಿದ್ದು ಮೃತಪಟ್ಟಿರುವಂತೆ ಬಿಂಬಿಸಲು ಆರೋಪಿಗಳು ಪ್ರಯತ್ನಿಸಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ADVERTISEMENT

ಜನ್ನಘಟ್ಟ ಕೃಷ್ಣಮೂರ್ತಿ ಜಾನಪದ ಕಲಾವಿರಾಗಿದ್ದು, ಅವರಿಗೆ ರಾಜ್ಯ ಯುವ ಪ್ರಶಸ್ತಿ ಸಹ ಲಭಿಸಿದೆ. ಅಲ್ಲದೇ, ಕೋಲಾರ ಜಾನಪದ ಕಲಾ ಸಂಘದ ಅಧ್ಯಕ್ಷರಾಗಿದ್ದರು. ಮಾನವ ಹಕ್ಕುಗಳು ಜಾಗೃತಿ ಸಮಿತಿಯ ರಾಜ್ಯ ಅಧ್ಯಕ್ಷರೂ (ಸಾಂಸ್ಕೃತಿಕ ಶಾಖೆ) ಆಗಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.