ಪ್ರಾತಿನಿಧಿಕ ಚಿತ್ರ
ಮುಳಬಾಗಿಲು: ಹೊಟ್ಟೆ ನೋವು ತಾಳಲಾರದೆ ಮಹಿಳೆಯೊಬ್ಬರು ಫ್ಯಾನ್‌ಗೆ ನೇಣು ಬಿಗಿದುಕೊಂಡು ಸಾವನ್ನಪ್ಪಿರುವ ಘಟನೆ ಗುರುವಾರ ಬೆಳಗ್ಗೆ ನಡೆದಿದೆ.
ನಗರದ ಕುರುಬರ ಪೇಟೆ ಸಬಾಹತ್ ಫಾತಿಮಾ (25) ಮೃತರು. 2024ರಲ್ಲಿ ಆಂಧ್ರಪ್ರದೇಶದ ಪಲಮನೇರು ನಗರದ ಸೈಯದ್ ಅಬ್ದುಲ ಎಂಬುವವರ ಜತೆಗೆ ಮದುವೆ ಮಾಡಿಕೊಡಲಾಗಿತ್ತು. ನಂತರ ಬೆಂಗಳೂರಿನಲ್ಲಿ ವಾಸ ಮಾಡುತ್ತಿದ್ದರು. ಆದರೆ, ಮದುವೆಯಾದ ನಂತರ ಸುಮಾರು ದಿನಗಳಿಂದ ಹೊಟ್ಟೆ ನೋವಿನಿಂದ ಬಳಲುತ್ತಿದ್ದರು. ಗುರುವಾರ ಬೆಳಗ್ಗೆ ಮನೆಯಲ್ಲಿ ಯಾರೂ ಇಲ್ಲದ ಸಮಯದಲ್ಲಿ ನೇಣು ಬಿಗಿದುಕೊಂಡು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಇನ್ ಸ್ಪೆಕ್ಟರ್ ರಾಜಣ್ಣ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.