ADVERTISEMENT

ಕಾರ್ಮಿಕರು ಪ್ರಾಮಾಣಿಕವಾಗಿ ದುಡಿಯಿರಿ

​ಪ್ರಜಾವಾಣಿ ವಾರ್ತೆ
Published 18 ಡಿಸೆಂಬರ್ 2019, 14:58 IST
Last Updated 18 ಡಿಸೆಂಬರ್ 2019, 14:58 IST
ಹೋಂಡಾ ಮೋಟರ್ಸ್ ಸೈಕಲ್ ಮಜ್ದೂರ್ ಸಂಘದ ಸದಸ್ಯರು ಕೋಲಾರದಲ್ಲಿ ಬುಧವಾರ ಶಾಸಕ ಕೆ.ಶ್ರೀನಿವಾಸಗೌಡರನ್ನು ಸನ್ಮಾನಿಸಿದರು.
ಹೋಂಡಾ ಮೋಟರ್ಸ್ ಸೈಕಲ್ ಮಜ್ದೂರ್ ಸಂಘದ ಸದಸ್ಯರು ಕೋಲಾರದಲ್ಲಿ ಬುಧವಾರ ಶಾಸಕ ಕೆ.ಶ್ರೀನಿವಾಸಗೌಡರನ್ನು ಸನ್ಮಾನಿಸಿದರು.   

ಕೋಲಾರ: ‘ಕಾರ್ಮಿಕರು ಜಿಲ್ಲೆಯ ಅಭಿವೃದ್ಧಿ ದೃಷ್ಟಿಯಿಂದ ಪ್ರಾಮಾಣಿಕವಾಗಿ ದುಡಿಯಬೇಕು’ ಎಂದು ಶಾಸಕ ಕೆ.ಶ್ರೀನಿವಾಸಗೌಡ ಸಲಹೆ ನೀಡಿದರು.

ಹೋಂಡಾ ಮೋಟರ್ಸ್ ಸೈಕಲ್ ಮಜ್ದೂರ್ ಸಂಘದ ಸದಸ್ಯರು ಇಲ್ಲಿ ಬುಧವಾರ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಸನ್ಮಾನ ಸ್ವೀಕರಿಸಿ ಮಾತನಾಡಿ, ‘ಕೈಗಾರಿಕಾ ಪ್ರದೇಶದಲ್ಲಿನ ಕಂಪನಿಗಳವರಿಗೆ ಸ್ಥಳೀಯರು ಕಿರುಕುಳ ನೀಡುತ್ತಿದ್ದಾರೆ ಎಂದು ದೂರು ಬಂದಿವೆ. ಇದಕ್ಕೆ ಯಾರೂ ಅವಕಾಶ ಕೊಡಬಾರದು’ ಎಂದರು.

‘ತಾಲ್ಲೂಕಿನ ನರಸಾಪುರ, ವೇಮಗಲ್ ಭಾಗದಲ್ಲಿ ಕಂಪನಿಗಳು ಸ್ಥಾಪನೆಯಾ ಆಗಿರುವುದು ಜನರ ಪುಣ್ಯ. ಕಂಪನಿಗಳಿಂದ ಸಾವಿರಾರು ಮಂದಿಗೆ ಉದ್ಯೋಗ ಸಿಕ್ಕಿದೆ. ಏನೇ ಸಮಸ್ಯೆ ಬಂದರೂ ಕಾರ್ಮಿಕರು ನನ್ನ ಗಮನಕ್ಕೆ ತಂದರೆ ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಚರ್ಚಿಸಿ ಬಗೆಹರಿಸುತ್ತೇನೆ’ ಎಂದು ಭರವಸೆ ನೀಡಿದರು.

ADVERTISEMENT

‘ಕೈಗಾರಿಕೆಗಳು ಕಾರ್ಪೊರೇಟ್‌ ಕಂಪನಿಗಳ ಸಾಮಾಜಿಕ ಹೊಣೆಗಾರಿಕೆಯಡಿ (ಸಿಎಸ್‌ಆರ್‌) ಸ್ಥಳೀಯ ಅಭಿವೃದ್ಧಿಗೆ ಸಾಕಷ್ಟು ಅನುದಾನ ನೀಡಿವೆ. ಸ್ಥಳೀಯರು ಕಾರ್ಮಿಕರು ಇದನ್ನು ಗಮನದಲ್ಲಿಟ್ಟುಕೊಂಡು ಬದ್ಧತೆಯಿಂದ ಕೆಲಸ ಮಾಡಬೇಕು. ಕಂಪನಿಗಳು ಬಂದಿರುವ ಲಾಭದಲ್ಲಿ ಅಭಿವೃದ್ಧಿಗೆ ಹಣಕಾಸು ನೆರವು ನೀಡುತ್ತಿವೆ’ ಎಂದು ಹೇಳಿದರು.

‘ಜಿಲ್ಲೆಯಲ್ಲಿ ಹಲವು ವರ್ಷಗಳಿಂದ ಬರ ಪರಿಸ್ಥಿತಿಯಿದ್ದು, ರೈತರು ಕೆಲಸಕ್ಕಾಗಿ ಗ್ರಾಮಗಳಿಂದ ನಗರ ಪ್ರದೇಶಕ್ಕೆ ವಲಸೆ ಹೋಗುವ ಪರಿಸ್ಥಿತಿ ನಿರ್ಮಾಣವಾಗಿತ್ತು. ಕೆ.ಸಿ ವ್ಯಾಲಿ ಯೋಜನೆ ಕಾಮಗಾರಿ ಪೂರ್ಣಗೊಂಡು ಕೆರೆಗಳಿಗೆ ನೀರು ಹರಿಯುತ್ತಿರುವುದರಿಂದ ಕೊಳವೆ ಬಾವಿಗಳಲ್ಲಿ ಅಂತರ್ಜಲ ಮಟ್ಟ ವೃದ್ಧಿಯಾಗಿದೆ. ಹೀಗಾಗಿ ಕೃಷಿ ಚಟುವಟಿಕೆಗೆ ಪೂರಕ ವಾತಾವರಣ ಸೃಷ್ಟಿಯಾಗಿದೆ’ ಎಂದು ಅಭಿಪ್ರಾಯಪಟ್ಟರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.