ಮುಳಬಾಗಿಲು: ತಾಲ್ಲೂಕಿನ ನಂಗಲಿ ಗ್ರಾಮದ ಯುವಕನೊಬ್ಬ ಅನುಮಾನಸ್ಪದ ರೀತಿಯಲ್ಲಿ ಸಾವನ್ನಪ್ಪಿದ್ದಾರೆ.
ತಾಲ್ಲೂಕಿನ ಎನ್.ವಡ್ಡಹಳ್ಳಿ ಪೆಟ್ರೋಲ್ ಬಂಕ್‌ನಲ್ಲಿ ಕೆಲಸ ಮಾಡುತ್ತಿದ್ದ ಸುನೀಲ್ ಕುಮಾರ್ (26) ಮೃತರು. ರಾತ್ರಿ ಕೆಲಸ ಮುಗಿಸಿಕೊಂಡು 12 ಗಂಟೆಗೆ ಮನೆಗೆ ಬಂದಿದ್ದಾರೆ. ಬೆಳಿಗ್ಗೆ ಎಷ್ಟೊತ್ತಾದರೂ ಹೊರಗಡೆ ಬಾರದ ಕಾರಣ ಗಮನಿಸಿದಾಗ ಸಾವನ್ನಪ್ಪಿರುವುದು ತಿಳಿದಿದೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ.
ಸುನೀಲ್ ಕುಮಾರ್ ಸಾವಿಗೆ ಕಾರಣ ಏನು ಎಂದು ತಿಳಿದು ಬಂದಿಲ್ಲ. ಸ್ಥಳಕ್ಕೆ ಶ್ವಾನದಳ, ಬೆರಳಚ್ಚು ತಜ್ಞರು ಭೇಟಿ ನೀಡಿ ಪರಿಶೀಲಿಸಿದರು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನಿಖಿಲ್.ಬಿ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ರವಿಶಂಕರ್, ಡಿವೈಎಸ್‌ಪಿ ಡಿ.ಸಿ.ನಂದಕುಮಾರ್, ಸರ್ಕಲ್ ಇನ್‌ಸ್ಪೆಕ್ಟರ್ ಸತೀಶ್ ಮತ್ತಿತರರು ಭೇಟಿ ಪರಿಶೀಲನೆ ನಡೆಸಿದರು. ನಂಗಲಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.