ಕೋಲಾರ: ನಗರ ಹೊರವಲಯದ ಅಗ್ನಿಶಾಮಕದಳ ಕಚೇರಿ ಸಮೀಪ ತಿರುವಿನಲ್ಲಿ ಭಾನುವಾರ ದ್ವಿಚಕ್ರ ವಾಹನ ಹಾಗೂ ಕಾರಿನ ನಡುವೆ ಸಂಭವಿಸಿದ ಅಪಘಾತದಲ್ಲಿ ಸವಾರ ದಾರುಣವಾಗಿ ಮೃತಪಟ್ಟಿದ್ದಾರೆ.
ನಗರದ ಅಮ್ಮವಾರಿಪೇಟೆಯ ಮಾಜ್ (21) ಮೃತ ಯುವಕ.
ಕಾಲೇಜೊಂದರಲ್ಲಿ ವ್ಯಾಸಂಗ ಮಾಡುತ್ತಿದ್ದ ಯುವಕ, ದ್ವಿಚಕ್ರ ವಾಹನದಲ್ಲಿ ಮುಳಬಾಗಿಲು ಕಡೆಗೆ ಹೋಗುತ್ತಿದ್ದಾಗ ಎದುರುಗಡೆಯಿಂದ ಬಂದ ಕಾರು ಡಿಕ್ಕಿಯಾಗಿದೆ. ಡಿಕ್ಕಿಯ ರಭಸಕ್ಕೆ ತೀವ್ರವಾಗಿ ಗಾಯಗೊಂಡು ನರಳಾಡುತ್ತಿದ್ದ ದೃಶ್ಯ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಕೋಡಲೇ ಸ್ಥಳೀಯರು ಯುವಕನನ್ನು ಆರ್.ಎಲ್.ಜಾಲಪ್ಪ ಆಸ್ಪತ್ರೆಗೆ ದಾಖಲಿಸಿದರು. ಅಷ್ಟರಲ್ಲಿ ಯುವಕ ಮೃತಪಟ್ಟಿದ್ದಾರೆ.
ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಮೃತ ಯುವಕನ ತಂದೆ ಸಲೀಂ ಕೋಲಾರದ ಹಣ್ಣಿನ ವ್ಯಾಪಾರಿಯಾಗಿದ್ದು, ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.