ADVERTISEMENT

ಅಂಗವಿಕಲರ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 7 ಫೆಬ್ರುವರಿ 2012, 9:10 IST
Last Updated 7 ಫೆಬ್ರುವರಿ 2012, 9:10 IST
ಅಂಗವಿಕಲರ ಪ್ರತಿಭಟನೆ
ಅಂಗವಿಕಲರ ಪ್ರತಿಭಟನೆ   

ಕೊಪ್ಪಳ: ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ಅಂಗವಿಕಲರ ಹಾಗೂ ವಿವಿಧೋದ್ದೇಶ ಮತ್ತು ಗ್ರಾಮೀಣ ಪುನರ್ವಸತಿ ಕಾರ್ಯಕರ್ತರ ಒಕ್ಕೂಟದ ಜಿಲ್ಲಾ ಸಮಿತಿ ಸದಸ್ಯರು ಸೋಮವಾರ ಇಲ್ಲಿ ಮೆರವಣಿಗೆ ನಡೆಸಿದರು.

ಕೇಂದ್ರೀಯ ಬಸ್ ನಿಲ್ದಾಣದಿಂದ ಅಶೋಕ ವೃತ್ತದ ವರೆಗೆ ವೆುರವಣಿಗೆ ನಡೆಸಿದ ಸಂಘಟನೆಯ ಸದಸ್ಯರು ತಮ್ಮ ಬೇಡಿಕೆಗಳನ್ನು ಈಡೇರಿಸುವಂತೆ ಘೋಷಣೆ ಕೂಗಿದರು.

ಅಂಗವಿಕಲರ ಪುನರ್ವಸತಿಗಾಗಿ ಜಾರಿಗೆ ತಂದಿರುವ ಈ ಯೋಜನೆಯಡಿ ಕಾರ್ಯ ನಿರ್ವಹಿಸುತ್ತಿರುವ ಕಾರ್ಯಕರ್ತರಿಗೆ ಸೇವಾ ಭದ್ರತೆ ಒದಗಿಸಬೇಕು. ಈ ಯೋಜನೆಯನ್ನು ಪಟ್ಟಣ ಮತ್ತು ನಗರ ಪ್ರದೇಶಗಳಿಗೂ ವಿಸ್ತರಿಸಬೇಕು, ವಿಕಲಚೇತನರ ಅಭಿವೃದ್ಧಿಗಾಗಿ ಪ್ರತ್ಯೇಕ ಸಚಿವಾಲಯ ಸ್ಥಾಪಿಸಬೇಕು, ರಾಜಕೀಯ ಕ್ಷೇತ್ರದಲ್ಲಿ ಶೇ 5ರಷ್ಟು ಮೀಸಲಾತಿ ನೀಡಬೇಕು ಹಾಗೂ ಎಲ್ಲ ಜಿಲ್ಲೆಗಳಲ್ಲಿ ಪುನರ್ವಸತಿ ಕೇಂದ್ರಗಳನ್ನು ಸ್ಥಾಪಿಸಬೇಕು ಎಂದು ಒತ್ತಾಯಿಸಿದರು.

ಸಮಿತಿಯ ಜಿಲ್ಲಾ ಅಧ್ಯಕ್ಷ ಆದಪ್ಪ, ಗೌರವಾಧ್ಯಕ್ಷ ಶರಣಬಸವ ಹಡಪದ, ಕಾರ್ಯದರ್ಶಿ ಮಂಜುನಾಥ, ಮಂಜುಳಾ ಪುರಾಣಿಕಮಠ ಮತ್ತಿತರರು ಪ್ರತಿಭಟನೆಯ ನೇತೃತ್ವ ವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.