ADVERTISEMENT

`ಅಪೌಷ್ಟಿಕತೆ ನಿವಾರಣೆ: ಆಂದೋಲನ ಅಗತ್ಯ'

​ಪ್ರಜಾವಾಣಿ ವಾರ್ತೆ
Published 6 ಫೆಬ್ರುವರಿ 2013, 10:56 IST
Last Updated 6 ಫೆಬ್ರುವರಿ 2013, 10:56 IST
`ಪೌಷ್ಟಿಕಾಂಶಗಳ ಪರಿಣಾಮಕಾರಿ ಅನುಷ್ಠಾನ' ಎಂಬ ವಿಷಯ ಕುರಿತು ಮಂಗಳವಾರ ಕೊಪ್ಪಳದಲ್ಲಿ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಕಾರ್ಯಾಗಾರವನ್ನು ಜಿಲ್ಲಾ ಪಂಚಾಯಿತಿ ಉಪಕಾರ್ಯದರ್ಶಿ ಮುಕ್ಕಣ್ಣ ಕರಿಗಾರ ಉದ್ಘಾಟಿಸಿದರು
`ಪೌಷ್ಟಿಕಾಂಶಗಳ ಪರಿಣಾಮಕಾರಿ ಅನುಷ್ಠಾನ' ಎಂಬ ವಿಷಯ ಕುರಿತು ಮಂಗಳವಾರ ಕೊಪ್ಪಳದಲ್ಲಿ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಕಾರ್ಯಾಗಾರವನ್ನು ಜಿಲ್ಲಾ ಪಂಚಾಯಿತಿ ಉಪಕಾರ್ಯದರ್ಶಿ ಮುಕ್ಕಣ್ಣ ಕರಿಗಾರ ಉದ್ಘಾಟಿಸಿದರು   

ಕೊಪ್ಪಳ: ಮಕ್ಕಳಲ್ಲಿನ ಅಪೌಷ್ಟಿಕತೆ ನಿವಾರಣೆಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಜೊತೆಗೆ ಆರೋಗ್ಯ, ಶಿಕ್ಷಣ ಮತ್ತು ಇತರ ಇಲಾಖೆಯ ಅಧಿಕಾರಿಗಳು, ಸಂಘ- ಸಂಸ್ಥೆಗಳು ಶ್ರಮಿಸುವ ಅಗತ್ಯವಿದೆ ಎಂದು ಜಿಲ್ಲಾ ಪಂಚಾಯಿತಿ ಉಪಕಾರ್ಯದರ್ಶಿ ಮುಕ್ಕಣ್ಣ ಕರಿಗಾರ್ ಹೇಳಿದರು.

ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಮಂಗಳವಾರ ಮೈಸೂರಿನ ಆಡಳಿತ ತರಬೇತಿ ಸಂಸ್ಥೆಯು `ಪೌಷ್ಟಿಕಾಂಶಗಳ ಪರಿಣಾಮಕಾರಿ ಅನುಷ್ಠಾನ' ಎಂಬ ವಿಷಯ ಕುರಿತು ವಿವಿಧ ಇಲಾಖೆ ಅಧಿಕಾರಿಗಳಿಗೆ ಏರ್ಪಡಿಸಿದ್ದ ಎರಡು ದಿನಗಳ ಕಾರ್ಯಾಗಾರವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಮೂಢನಂಬಿಕೆ, ಅನಕ್ಷರತೆ ಜೊತೆಗೆ ಬಾಲ್ಯ ವಿವಾಹ ಪದ್ಧತಿ ಮಕ್ಕಳಲ್ಲಿನ ಅಪೌಷ್ಟಿಕತೆಗೆ ಪ್ರಮುಖ ಕಾರಣ.   ಅಪೌಷ್ಟಿಕತೆ ನಿವಾರಣೆಗೆ ಸರ್ಕಾರ ಹಲವು ಯೋಜನೆಗಳನ್ನು ಜಾರಿಗೊಳಿಸಿದೆ. ಅಂಗನವಾಡಿ ಕೇಂದ್ರಗಳಲ್ಲಿ ಮಕ್ಕಳಿಗೆ ಪೂರಕ ಪೌಷ್ಟಿಕ ಆಹಾರವನ್ನು ನೀಡಲಾಗುತ್ತಿದೆ.

ADVERTISEMENT

ಆದರೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯೊಂದಿಗೆ ಇತರ ಇಲಾಖೆಗಳು ಸಮನ್ವಯದಿಂದ ಕಾರ್ಯ ನಿರ್ವಹಿಸಿ, ಅಪೌಷ್ಟಿಕತೆ ನಿವಾರಣೆಗಾಗಿನ  ಕಾರ್ಯಕ್ರಮಗಳನ್ನು ಆಂದೋಲನ ರೀತಿಯಲ್ಲಿ ಹಮ್ಮಿಕೊಳ್ಳುವ ಅಗತ್ಯವಿದೆ ಎಂದರು.

ಧಾರವಾಡದ ಆರ್‌ಸಿಎಚ್ ಕಾರ್ಯ ಕ್ರಮಾಧಿಕಾರಿ ಡಾ.ಬಬ್ರುವಾಡ್ ಮಾತನಾಡಿ, ಅಂಗನವಾಡಿಗಳಲ್ಲಿನ ಪರಿಸ್ಥಿತಿಯನ್ನು ಸುಧಾರಿಸುವುದು ತುರ್ತು ಅಗತ್ಯಗಳಲ್ಲೊಂದು ಎಂದು ಹೇಳಿದರು.

ಮೈಸೂರಿನ ಆಡಳಿತ ತರಬೇತಿ ಸಂಸ್ಥೆಯ ಅಧಿಕಾರಿ ಶಂಕರ್ ಸಹ ಮಾತನಾಡಿದರು. ಜಿಲ್ಲಾ ಪಂಚಾಯಿತಿ ಮುಖ್ಯ ಯೋಜನಾಧಿಕಾರಿ ಟಿ.ಪಿ.ದಂಡಿಗದಾಸರ್, ಜಿಲ್ಲಾ ಆಡಳಿತ ತರಬೇತಿ ಸಂಸ್ಥೆಯ ಉಪಪ್ರಾಚಾರ್ಯ ಲಾಯಿಖ್ ಅಲಿ ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.