ADVERTISEMENT

`ಆರೋಗ್ಯವಂತ ದೇಹಕ್ಕೆ ಕ್ರೀಡೆ ಅಗತ್ಯ'

​ಪ್ರಜಾವಾಣಿ ವಾರ್ತೆ
Published 2 ಸೆಪ್ಟೆಂಬರ್ 2013, 8:26 IST
Last Updated 2 ಸೆಪ್ಟೆಂಬರ್ 2013, 8:26 IST

ಕೊಪ್ಪಳ: ಆರೋಗ್ಯವಂತ ದೇಹ ಮತ್ತು ಮನಸ್ಸಿಗಾಗಿ ಕ್ರೀಡೆ ಅವಶ್ಯಕ ಎಂದು ಶಾಸಕ ಕೆ.ರಾಘವೇಂದ್ರ ಹಿಟ್ನಾಳ ಹೇಳಿದರು.
ಕೊಪ್ಪಳ ಜಿಲ್ಲಾ ಸ್ಪೋರ್ಟ್ಸ್ ಅಕಾಡೆಮಿ ಆಶ್ರಯದಲ್ಲಿ ಭಾನುವಾರ ಇಲ್ಲಿನ ಗವಿಸಿದ್ದೇಶ್ವರ ಮೈದಾನದಲ್ಲಿ ನಡೆದ ಕ್ರಿಕೆಟ್ ತರಬೇತಿ ಶಿಬಿರ ಉದ್ಘಾಟಿಸಿ ಅವರು ಮಾತನಾಡಿದರು.

ನಗರದಲ್ಲಿ ಪ್ರಥಮ ಬಾರಿಗೆ ಈ ತರಬೇತಿ ಶಿಬಿರ ನಡೆಯುತ್ತಿರುವುದು ಶ್ಲಾಘನೀಯ. ಇಲ್ಲಿ ತರಬೇತಿ ಪಡೆದ ಕ್ರೀಡಾಪಟುಗಳು ರಾಷ್ಟ್ರಮಟ್ಟದಲ್ಲಿ ಮಿಂಚಬೇಕು. ಯುವಜನರು ತಮ್ಮ ಭವಿಷ್ಯಕ್ಕಾಗಿ ಒಳ್ಳೆಯ ಕ್ರೀಡಾ ತರಬೇತಿ ಪಡೆಯಬೇಕು. ಇಲ್ಲಿ ವೃತ್ತಿಪರ ತರಬೇತಿ ನೀಡಬೇಕಾದ ಅಗತ್ಯವಿದೆ ಎಂದು ಅವರು ಹೇಳಿದರು.

ಅಕಾಡೆಮಿಯ ಅಧ್ಯಕ್ಷ ಮಲ್ಲಿಕಾರ್ಜುನ ಬೆಲ್ಲದ ಮಾತನಾಡಿ, ಕೊಪ್ಪಳದಲ್ಲಿ ಕ್ರೀಡಾ ತರಬೇತಿದಾರರ ಕೊರತೆಯಿದೆ. ಆದ್ದರಿಂದ ಸ್ಪೋರ್ಟ್ಸ್ ಅಕಾಡೆಮಿ ಮೂಲಕ ಆಸಕ್ತರಿಗೆ ತರಬೇತಿ ನೀಡಲಾಗುತ್ತದೆ. ಅದಕ್ಕೆ ಸಾರ್ವಜನಿಕರ ಪ್ರೋತ್ಸಾಹ, ಕ್ರೀಡಾಳುಗಳ ಆಸಕ್ತಿ ಮುಖ್ಯ ಎಂದು ನುಡಿದರು. ಖಲೀಲ್ ಪಾಟೀಲ ನಿರೂಪಿಸಿದರು. ಪಂಚಾಕ್ಷರಿ ಹಿರೇಮಠ ವಂದಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.