ADVERTISEMENT

ಏಡ್ಸ್‌ ಮುಕ್ತ ಸಮಾಜ ನಿರ್ಮಾಣ ಅಗತ್ಯ

​ಪ್ರಜಾವಾಣಿ ವಾರ್ತೆ
Published 2 ಡಿಸೆಂಬರ್ 2017, 7:14 IST
Last Updated 2 ಡಿಸೆಂಬರ್ 2017, 7:14 IST

ಕನಕಗಿರಿ: ಅಸುರಕ್ಷಿತ ಲೈಂಗಿಕ ಸಂಪರ್ಕದಿಂದ ಏಡ್ಸ್‌ ರೋಗ ಹರಡುತ್ತಿದ್ದು, ಬಗ್ಗೆ ಎಚ್ಚರ ವಹಿಸಿಸಬೇಕು. ಏಡ್ಸ್‌ ಮುಕ್ತ ಸಮಾಜ ನಿರ್ಮಾಣಕ್ಕೆ ಶ್ರಮಿಸಬೇಕೆಂದು ಸಮುದಾಯ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ಪವನಕುಮಾರ ಅರವಟಗಿಮಠ ತಿಳಿಸಿದರು.

ಇಲ್ಲಿನ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಶುಕ್ರವಾರ ನಡೆದ ವಿಶ್ವ ಏಡ್ಸ್‌ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿ, ಏಡ್ಸ್ ನಿಯಂತ್ರಣಕ್ಕೆ ಜಾಗೃತಿ ಅಗತ್ಯ ಎಂದು ಅವರು ಹೇಳಿದರು. ವೈದ್ಯ ಡಾ.ನಾಗರಾಜ ಪಾಟೀಲ ಮಾತನಾಡಿ, ಏಡ್ಸ್‌ಗೆ ಯುವಕರು ಹೆಚ್ಚು ಬಲಿಯಾಗುತ್ತಿದ್ದಾರೆ, ಉತ್ತಮ ಹವ್ಯಾಸಗಳನ್ನು ರೂಡಿಸಿಕೊಳ್ಳಬೇಕೆಂದು ತಿಳಿಸಿದರು,

ಸಮುದಾಯ ಆರೋಗ್ಯ ಕೇಂದ್ರದ ಏಡ್ಸ್ ಆಪ್ತ ಸಮಾಲೋಚಕ ಸಿದ್ದರಾಮಪ್ಪ, ಶಿಕ್ಷಣ ಸಂಯೋಜಕ ಮಲ್ಲೇಶ ನಾಯಕ, ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಶರಣೇಗೌಡ ಹೇರೂರು, ಮುಖ್ಯಗುರು ಈಶಪ್ಪ ಇಟಗಿ, ಎನ್‌.ಎಸ್.ಎಸ್ ಕಾರ್ಯಕ್ರಮ ಅಧಿಕಾರಿ ಎನ್,ಮಾರೆಪ್ಪ ಮಾತನಾಡಿದರು.

ADVERTISEMENT

ವಿವಿಧ ಶಾಲಾ– ಕಾಲೇಜು ವಿದ್ಯಾರ್ಥಿಗಳು ಪಟ್ಟಣದಲ್ಲಿ ಸಂಚರಿಸಿ ಏಡ್ಸ್‌ ಕುರಿತು ಜಾಗೃತಿ ಜಾಥಾ ನಡೆಸಿದರು. ಹಿರಿಯ ಆರೋಗ್ಯ ಸಹಾಯಕಿ ನೂರಜಾನ್ ಬೇಗಂ, ಆಪ್ತ ಸಮಾಲೋಚಕ ಮೈಬೂಬಸಾಬ್, ಮಂಜುಳಾ, ಯಲ್ಲಮ್ಮ, ಪ್ರೇಮಾ, ಸಂತೋಷ, ಕಿರಣಕುಮಾರ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.