
ಪ್ರಜಾವಾಣಿ ವಾರ್ತೆಕುಷ್ಟಗಿ: ಪಟ್ಟಣ ಸೇರಿದಂತೆ ಸುತ್ತಲಿನ ಪ್ರದೇಶಗಳಲ್ಲಿ ಬುಧವಾರ ಸಂಜೆ ಉತ್ತಮ ಮಳೆ ಸುರಿದಿದೆ.
ಮಳೆ ಕೇವಲ ಮೂರು ನಾಲ್ಕು ಕಿಮೀ ವ್ಯಾಪ್ತಿಗೆ ಮಾತ್ರ ಸೀಮತವಾಗಿತ್ತು. ಹೊಲಗಳ ಬದು ಮತ್ತು ಒಡ್ಡುಗಳು ನೀರಿನಿಂದ ಭರ್ತಿಯಾಗಿದ್ದವು.
ಈ ಭಾಗದಲ್ಲಿ ಬಿತ್ತನೆಯಾಗಿರುವ ಹೆಸರು, ಸೂರ್ಯಕಾಂತಿ, ಮೆಕ್ಕೆಜೋಳ ಮೊದಲಾದ ಬೆಳೆಗಳಿಗೆ ಅನುಕೂಲವಾಗಿದೆ ಎಂದು ಪಟ್ಟಣದ ರೈತ ಹನಮಪ್ಪ ಚೂರಿ ಹೇಳಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.