ADVERTISEMENT

ಕೊಪ್ಪಳದಲ್ಲಿ ಬ್ಲಡ್ ಬ್ಯಾಂಕ್ ಸ್ಥಾಪನೆ

​ಪ್ರಜಾವಾಣಿ ವಾರ್ತೆ
Published 11 ಅಕ್ಟೋಬರ್ 2011, 8:25 IST
Last Updated 11 ಅಕ್ಟೋಬರ್ 2011, 8:25 IST
ಕೊಪ್ಪಳದಲ್ಲಿ ಬ್ಲಡ್ ಬ್ಯಾಂಕ್ ಸ್ಥಾಪನೆ
ಕೊಪ್ಪಳದಲ್ಲಿ ಬ್ಲಡ್ ಬ್ಯಾಂಕ್ ಸ್ಥಾಪನೆ   

ಕೊಪ್ಪಳ: ನಗರದಲ್ಲಿ ಬ್ಲಡ್ ಬ್ಯಾಂಕ್ ಸ್ಥಾಪಿಸುವ ನಿಟ್ಟಿನಲ್ಲಿ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಶಾಸಕ ಸಂಗಣ್ಣ ಕರಡಿ ಹೇಳಿದರು.

ಅವರು ನಗರದಲ್ಲಿ ಈಚೆಗೆ ರೋಟರಿ ಕ್ಲಬ್‌ವತಿಯಿಂದ ನೀಡಿದ ಸನ್ಮಾನ ಸ್ವೀಕರಿಸಿ ಮಾತನಾಡಿದರು.
ಬ್ಲಡ್ ಬ್ಯಾಂಕ್‌ನ ಅಗತ್ಯವಿದೆ. ಈಗಾಗಲೇ ನಗರದಲ್ಲಿ ರಕ್ತ ಸಂಗ್ರಹಣಾ ಘಟಕ ಕಾರ್ಯಾರಂಭ ಮಾಡಿರುವುದು ಸಮಾಧಾನದ ಸಂಗತಿ. ಆದರೆ, ನಗರ ಹಾಗೂ ಸುತ್ತಮುತ್ತಲಿನ ಗ್ರಾಮಗಳ ಜನರ ಅನುಕೂಲಕ್ಕಾಗಿ ಬ್ಲಡ್ ಬ್ಯಾಂಕ್ ಸ್ಥಾಪಿಸುವ ಸಂಬಂಧ ಶ್ರಮಿಸುವುದಾಗಿ ಹೇಳಿದರು.

ಶಾಸಕನಾಗಿ ಆಯ್ಕೆಗೊಂಡ ನಂತರ ಜವಾಬ್ದಾರಿ ಹೆಚ್ಚಿದೆ. ಹೀಗಾಗಿ ರೋಟರಿಯಂತಹ ಸಂಘ-ಸಂಸ್ಥೆಗಳ ಸಲಹೆ ಪಡೆದು ಕೊಪ್ಪಳ ಮತಕ್ಷೇತ್ರದ ಅಭಿವೃದ್ಧಿಗೆ ಶ್ರಮಿಸುವುದಾಗಿ ಹೇಳಿದರು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಮಹಾದೇವಸ್ವಾಮಿ, ಇಂದಿರಾ ಭಾವಿಕಟ್ಟಿ, ಶೈಲಜಾ ಶರಣಪ್ಪ ಅವರು ಇದೇ ಸಂದರ್ಭದಲ್ಲಿ ಕ್ಲಬ್‌ನ ಸದಸ್ಯತ್ವ ಪಡೆದರು.

ಕ್ಲಬ್ ಅಧ್ಯಕ್ಷ ನೀಲಪ್ಪ ಭಾವಿಕಟ್ಟಿ ಅಧ್ಯಕ್ಷತೆ ವಹಿಸಿದ್ದ ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯಿತಿ ಸದಸ್ಯ ನಾಗನಗೌಡ ಮಾಲಿಪಾಟೀಲ, ಕ್ಲಬ್‌ನ ಕಾರ್ಯದರ್ಶಿ ಪ್ರಶಾಂತ ಹಾದಿಮನಿ ಉಪಸ್ಥಿತರಿದ್ದರು.

ಕ್ಲಬ್‌ನ ಮಾಜಿ ಜಿಲ್ಲಾ ಗವರ್ನರ್ ಡಾ.ಕೆ.ಜಿ.ಕುಲಕರ್ಣಿ ಪ್ರಾಸ್ತಾವಿಕವಾಗಿ ಮಾತನಾಡಿದರು. ರಾಜಶ್ರೀ ಗುಮಾಸ್ತೆ ಪ್ರಾರ್ಥನಾ ಗೀತೆ ಹಾಡಿದರು. ಶೈಲಜಾ ಕಾರ್ಯಕ್ರಮ ನಿರೂಪಿಸಿದರು ಹಾಗೂ ಎ.ಜಿ.ಶರಣಪ್ಪ ವಂದಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.