ADVERTISEMENT

ದಲಿತರ ಮೇಲೆ ದೌರ್ಜನ್ಯ ಆರೋಪ: ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 19 ಜೂನ್ 2013, 10:27 IST
Last Updated 19 ಜೂನ್ 2013, 10:27 IST

ಯಲಬುರ್ಗಾ: ತಾಲ್ಲೂಕಿನ ಮುರಡಿ, ತೊಂಡಿಹಾಳ, ಕೊಪ್ಪಳದ ಅಲ್ಲಾನಗರ ಹಾಗೂ ಇನ್ನಿತರ ಗ್ರಾಮಗಳಲ್ಲಿ ದಲಿತರ ಮೇಲೆ ದೌರ್ಜನ್ಯ ನಡೆದಿದೆ ಎಂದು ಆರೋಪಿಸಿ ಸೋಮವಾರ ಮಾದಿಗ ದಂಡೋರ ಹೋರಾಟ ಸಮಿತಿ ಪ್ರತಿಭಟನೆ ನಡೆಸಿತು.

ಪಟ್ಟಣದ ವಿವಿಧ ಬೀದಿಗಳಲ್ಲಿ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗುತ್ತಾ ಪ್ರತಿಭಟನೆ ನಡೆಸಿದರು. ಕಿತ್ತೂರು ಚೆನ್ನಮ್ಮ ವೃತ್ತದ ಬಳಿ ಸಾರ್ವಜನಿಕರನ್ನುದ್ದೇಶಿ ದಲಿತ ಸಂಘರ್ಷ ಸಮಿತಿ ತಾಲ್ಲೂಕು ಸಂಚಾಲಕ ರುದ್ರಪ್ಪ ನಡುಲಮನಿ ಮಾತನಾಡಿ ಅಸ್ಪೃಶ್ಯತೆ ನಿವಾರಣೆಯಲ್ಲಿ ತಾಲ್ಲೂಕು ಆಡಳಿತ ಸಂಪೂರ್ಣ ವಿಫಲವಾಗಿದ್ದರಿಂದ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು.

ದೌರ್ಜನ್ಯಕ್ಕೆ ಒಳಗಾದ ಕುಟುಂಬಗಳಿಗೆ ತಲಾ 2 ಲಕ್ಷ ರೂಪಾಯಿ ಪರಿಹಾರ ಹಾಗೂ 2 ಎಕರೆ ಭೂಮಿ ಮಂಜೂರು ಮಾಡಬೇಕು. ತಾಲ್ಲೂಕಿನ ವಿವಿಧ ಗ್ರಾಮಗಳಲ್ಲಿನ ದಲಿತ ಕಾಲೋನಿಗಳಿಗೆ ಮೂಲ ಸೌಲಭ್ಯ ಕಲ್ಪಿಸುವುದು. ದೌರ್ಜನ್ಯ ಎಸಗಿದವರಿಗೆ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ಯಾವ ಜನಾಂಗಕ್ಕೂ ಅನ್ಯಾಯವಾಗದಂತೆ ಸರ್ಕಾರ ಜಾಗೃತಿ ವಹಿಸುತ್ತದೆ. ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಮನವಿ ಸ್ವೀಕರಿಸಿದ ತಹಶೀಲ್ದಾರ್ ಎಂ.ಬಿ.ಬಿರಾದಾರ ಭರವಸೆ ನೀಡಿದರು.

ಮಿಶ್ರಪ್ರತಿಕ್ರಿಯೆ: ಈ ವಿಷಯಕ್ಕೆ ಸಂಬಂಧಿಸಿದಂತೆ ದಲಿತ ಸಂಘಟನೆಗಳು ಸೋಮವಾರ ಕರೆದ್ದ್ದಿದ ಬಂದ್‌ಗೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ. ಪ್ರಮುಖ ರಸ್ತೆಬದಿಯ ಅಂಗಡಿ ಮುಗ್ಗಟ್ಟುಗಳು ಬಂದ್ ಮಾಡಿ ಪ್ರತಿಭಟನೆಗೆ ಬೆಂಬಲಿಸಿದರೆ. ಕಾಲೊನಿಯಲ್ಲಿನ ಬಹುತೇಕ ಅಂಗಡಿಗಳು ತೆರೆದಿದ್ದವು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.