ADVERTISEMENT

ನವಜಾತ ಹೆಣ್ಣು ಶಿಶು ಪತ್ತೆ

​ಪ್ರಜಾವಾಣಿ ವಾರ್ತೆ
Published 17 ಅಕ್ಟೋಬರ್ 2017, 7:25 IST
Last Updated 17 ಅಕ್ಟೋಬರ್ 2017, 7:25 IST
ಯಲಬುರ್ಗಾ ತಾಲ್ಲೂಕಿನ ಗುನ್ನಾಳದಲ್ಲಿ ಪತ್ತೆಯಾದ ನವಜಾತ ಹೆಣ್ಣು ಶಿಶು
ಯಲಬುರ್ಗಾ ತಾಲ್ಲೂಕಿನ ಗುನ್ನಾಳದಲ್ಲಿ ಪತ್ತೆಯಾದ ನವಜಾತ ಹೆಣ್ಣು ಶಿಶು   

ಕೊಪ್ಪಳ: ಯಲಬುರ್ಗಾ ತಾಲ್ಲೂಕಿನ ಗುನ್ನಾಳ ಗ್ರಾಮದ ನಂದಿನಗರಲ್ಲಿ ಸೋಮವಾರ ನವಜಾತ ಹೆಣ್ಣು ಶಿಶು ಪತ್ತೆಯಾಗಿದೆ. ಗ್ರಾಮದ ನಿವಾಸಿ ಶರಣಮ್ಮ ಜೋಳ್ಳಿನ ಎಂಬುವವರು ಮಗುವನ್ನು ರಕ್ಷಿಸಿ ಮನೆಯಲ್ಲಿ ತಾತ್ಕಾಲಿಕ ಆಶ್ರಯ ನೀಡಿದ್ದಾರೆ.

ಮಾಹಿತಿ ತಿಳಿದ ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ರಕ್ಷಣಾಧಿಕಾರಿ ಪ್ರಶಾಂತ ರೆಡ್ಡಿ, ಸಮಾಜ ಕಾರ್ಯಕರ್ತ ರವಿಕುಮಾರ ಪವಾರ, ಬೇವೂರು ಪೊಲೀಸ್ ಠಾಣೆಯ ಪಿ.ಎಸ್.ಐ ಶಿವರಾಜ್, ಸಿಬಂಧಿಗಳಾದ ರಾಮಣ್ಣ ಅವರು ಸ್ಥಳಕ್ಕೆ ತೆರಳಿ ಮಗುವನ್ನು ವಶಕ್ಕೆ ಪಡೆದು ಜಿಲ್ಲಾ ಆಸ್ಪತ್ರೆಗೆ ಹೆಚ್ಚಿನ ಚಿಕಿತ್ಸೆಗಾಗಿ ದಾಖಲಿಸಿದರು.

ಬೇವೂರು ಪೊಲೀಸ್ ಠಾಣೆಯ ಪಿ.ಎಸ್.ಐ ಶಿವರಾಜ್ ಮಾತನಾಡಿ, ಪರಿತ್ಯಜಿಸಲ್ಪಟ್ಟ ಮಕ್ಕಳು ಕಂಡುಬಂದಲ್ಲಿ ಹತ್ತಿರದ ಪೊಲೀಸ್ ಠಾಣೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಅಥವಾ ಮಕ್ಕಳ ಸಹಾಯವಾಣಿ-1098ಕ್ಕೆ ಮಾಹಿತಿ ನೀಡಬೇಕು ಎಂದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.