ADVERTISEMENT

ನೀತಿ ಸಂಹಿತೆ ಉಲ್ಲಂಘನೆ: ನಿಗಾವಹಿಸಲು ಜಿಲ್ಲಾಧಿಕಾರಿ ಸೂಚನೆ

ಅಧಿಕಾರಿಗಳ ತಂಡಕ್ಕೆ ತರಬೇತಿ ಕಾರ್ಯಾಗಾರ

​ಪ್ರಜಾವಾಣಿ ವಾರ್ತೆ
Published 30 ಮಾರ್ಚ್ 2018, 12:38 IST
Last Updated 30 ಮಾರ್ಚ್ 2018, 12:38 IST

ಕೊಪ್ಪಳ: 'ವಿಧಾನಸಭಾ ಚುನಾವಣೆ ನೀತಿ ಸಂಹಿತೆ ಪಾಲಿಸಬೇಕಾದ್ದು ಎಲ್ಲ ರಾಜಕೀಯ ಪಕ್ಷಗಳ ಜವಾಬ್ದಾರಿ. ಉಲ್ಲಂಘನೆಯಾದರೆ ಅಂಥ ಪ್ರಕರಣಗಳ ಬಗ್ಗೆ ಅಧಿಕಾರಿಗಳು ತೀವ್ರ ನಿಗಾ ವಹಿಸಬೇಕು' ಎಂದು ಜಿಲ್ಲಾಧಿಕಾರಿ ಎಂ.ಕನಗವಲ್ಲಿ ಹೇಳಿದರು.ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಬುಧವಾರ ಚುನಾವಣಾ ವಿವಿಧ ತಂಡಗಳಿಗೆ ಏರ್ಪಡಿಸಲಾಗಿದ್ದ ತರಬೇತಿಯಲ್ಲಿ ಅವರು ಮಾತನಾಡಿದರು.

'ಈಗಾಗಲೇ ಮಾದರಿ ನೀತಿ ಸಂಹಿತೆ ಜಾರಿಯಾಗಿದ್ದು, ನೀತಿ ಸಂಹಿತೆ ಪಾಲನೆಯ ಬಗ್ಗೆ ನಿಗಾವಹಿಸಲು, ಅಧಿಕಾರಿ, ಸಿಬ್ಬಂದಿಗಳನ್ನು ನಿಯೋಜಿಸಲಾಗಿದೆ. ಸೆಕ್ಟರ್ ಅಧಿಕಾರಿಗಳು, ಪ್ಲೈಯಿಂಗ್ ಸ್ಕ್ವಾಡ್, ವಿಡಿಯೋ  ವೀಕ್ಷಣಾ ತಂಡ,  ಚುನಾವಣಾ ವೆಚ್ಚ ಪರಿಶೀಲನೆ, ಚೆಕ್‍ಪೋಸ್ಟ್ ತಂಡ, ವಿವಿಧ ಪೊಲೀಸ್ ಅಧಿಕಾರಿಗಳ ತಂಡಗಳನ್ನು ರಚಿಸಲಾಗಿದೆ. ಈ ಎಲ್ಲ ತಂಡಗಳು ತಮಗೆ ವಹಿಸಿರುವ ಜವಾಬ್ದಾರಿಯನ್ನು ಚಾಚೂ ತಪ್ಪದೆ ನಿರ್ವಹಿಸಬೇಕು' ಎಂದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಅನೂಪ್ ಶೆಟ್ಟಿ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ವೆಂಕಟರಾಜಾ, ಹೆಚ್ಚುವರಿ ಜಿಲ್ಲಾಧಿಕಾರಿ ಡಾ.ರುದ್ರೇಶ್ ಘಾಳಿ, ಉಪವಿಭಾಗಾಧಿಕಾರಿ ರವಿ ತಿರ್ಲಾಪುರ ಇದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.